ಬೀದರ.24ಜನವರಿ.25:- ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಬೀದರ ಜಿಲ್ಲೆಯಲ್ಲಿ ಹಾಲಿ ಇರುವ 22/110/11ಕೆವಿ ಹಲಬರ್ಗಾ ವಿದ್ಯುತ್ ಸ್ವೀಕರಣಾ ಕೇಂದ್ರದಿoದ ಹೊಸದಾಗಿ ನಿರ್ಮಿಸಿರುವ 220/110/11ಕೆವಿ ಸಂತಪುರ ವಿದ್ಯುತ್ ಸ್ವೀಕರಣಾ ಕೇಂದ್ರದ ವರೆಗೆ ನಿರ್ಮಿಸಿರುವ 28.084 ಕಿ.ಮೀ. ಉದ್ದದ 220ಕೆವಿ ವಿದ್ಯುತ್ ಮಾರ್ಗವು ಭಾಲ್ಕಿ ತಾಲ್ಲೂಕಿನ ಮಳಚಾಪುರ, ಸೇವಾನಗರ, ಹಾಲಹಿಪ್ಪರಗಾ, ಕೋಸಮ, ನಾಗೂರ (ಕೆ), ಖಾಶೆಂಪುರ, ಚಂದಾಪುರ, ಗೋರನಾಳ ಮತ್ತು ಹಾಜನಾಳ ಮತ್ತು ಔರಾದ ತಾಲ್ಲೂಕಿನ ಹೆಡಗಾಪುರ ಮತ್ತು ನಾಗೂರ (ಬಿ) ಗ್ರಾಮಗಳ ಸರಹದ್ದಿನಲ್ಲಿ ಹಾದುಹೋಗಿರುತ್‌ತದೆ. ಮತ್ತು ಹೊಸದಾಗಿ ನಿರ್ಮಿಸಿರುವ 220/110/11ಕೆವಿ ಸಂತಪುರ ವಿದ್ಯುತ್ ಸ್ವೀಕರಣಾ ಕೇಂದ್ರದಿAದ ಹೊರಹೋಗುತ್ತಿರುವ 110ಕೆವಿ ವಿದ್ಯುತ್ ಮಾರ್ಗಗಳು ನಾಗೂರ(ಬಿ), ಮಸ್ಕಲ ಮತ್ತು ಚಟನಾಳ ಗ್ರಾಮಗಳ ಸರಹದ್ದಿನಲ್ಲಿ ಹಾದುಹೋಗಿರುತ್ತದೆ.
ಈ ವಿದ್ಯುತ್ ಮಾರ್ಗಗಳಲ್ಲಿ ದಿನಾಂಕ: 25-01-2025 ರಂದು ಅಥವಾ ತದನಂತರ ಯಾವುದೇ ದಿನಾಂಕದoದು ವಿದ್ಯುತ್ ಹರಿಸಲಾಗುವುದು. ಕಾರಣ ಸಾರ್ವಜನಿಕರು ವಿದ್ಯುತ್ ಗೋಪುರಕ್ಕೆ ಹತ್ತುವುದಾಗಲಿ ಅಥವಾ ಅದಕ್ಕೆ ದನ ಕರುಗಳನ್ನು ಕಟ್ಟುವುದಾಗಲಿ, ಹಸಿರು ಟೊಂಗೆಗಳನ್ನು ವಿದ್ಯುತ್ ಲೈನಿಗೆ ಎಸೆಯುವುದು ಪ್ರಾಣಕ್ಕೆ ಅಪಾಯವಿರುವುದರಿಂದ ಸಾರ್ವಜನಿಕರು ಈ ಚಟುವಟಿಕೆಗಳನ್ನು ಮಾಡಬಾರದೆಂದು ಬೀದರ ಬೃಹತ್ ಕಾಮಗಾರಿ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…