ಬೀದರ.07.ಫೆಬ್ರುವರಿ.25: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್‌ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ ರೂ.1,000/-ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025ನೇ ಫೆಬ್ರವರಿ 12 ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…