ವಿಧಾನಸೌಧ ಆವರಣದಲ್ಲಿ ಫೆ.28 ರಿಂದ ಮಾ.3 ರವರೆಗೆ ಪುಸ್ತಕ ಮೇಳ ಆಯೋಜನೆ:


ಮೇಳಕ್ಕೆ ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಅವಕಾಶ.

ಬೀದರ.24.ಜನವರಿ.25:- ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ದಿನಾಂಕ: 28-02-2025 ರಿಂದ 03-03-2025 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ “ಪುಸ್ತಕ ಮೇಳ’ವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸುತ್ತಿದ್ದು, ಸದರಿ ಮೇಳಕ್ಕೆ ಸಂಬAಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಅದನ್ನು ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಗೌರವಪೂರ್ವಕವಾಗಿ ಬಹುಮಾನವನ್ನು ನೀಡಲಾಗುವುದು.


ಆದ್ದರಿಂದ ಆಸಕ್ತರು ಈ ಕಾರ್ಯಕ್ರಮಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ಅಂಚೆ ವಿಳಾಸ, ದೂರವಾಣಿ ಸಂಖ್ಯೆ, ಮುಂತಾದ ವಿವರಗಳೊಂದಿಗೆ ದಿನಾಂಕ: 03-02-2025ರೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಕೊಠಡಿ ಸಂಖ್ಯೆ:121, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು-560001 ಇವರಿಗೆ ಕಳುಹಿಸುವಂತೆ ಕರ್ನಾಟಕ ವಿಧಾನಸಭೆ ಸಚಿವಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

7 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

7 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

7 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

7 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

7 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

7 hours ago