02/08/2025 5:00 PM

Translate Language

Home » ಲೈವ್ ನ್ಯೂಸ್ » ವಿಭಾಗ ಮಟ್ಟದ ಮಾಧ್ಯಮ ತರಬೇತಿ: ಹೆಸರು ನೋಂದಣಿಗೆ ಆಗಸ್ಟ್ 2 ಕೊನೆಯ ದಿನ

ವಿಭಾಗ ಮಟ್ಟದ ಮಾಧ್ಯಮ ತರಬೇತಿ: ಹೆಸರು ನೋಂದಣಿಗೆ ಆಗಸ್ಟ್ 2 ಕೊನೆಯ ದಿನ

Facebook
X
WhatsApp
Telegram

ರಾಯಚೂರು.01.ಆಗಸ್ಟ್.25: ಕರ್ನಾಟಕ ಮಾಧ್ಯಮ ಅಕಾಡೆಮಿಯು ದಿನಾಂಕ 6-8-2025 ರಂದು ಬೀದರ್‌ನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಪರಿಸರ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರದ ಕುರಿತು ಮಾತನಾಡಲಿದ್ದಾರೆ. ಪೌರಾಡಳಿತ ಸಚಿವ ಶ್ರೀ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತರಬೇತಿ ಕಾರ್ಯಕ್ರಮದಲ್ಲಿ “ನ್ಯೂಸ್ ರೂಂ ನಲ್ಲಿ ಎಐ ಮತ್ತು ನಾನು” ಹಾಗೂ “ಸುದ್ದಿಯಲ್ಲಿ ನಿಖರತೆ ಮತ್ತು ಪರಿಣಾಮಕಾರಿ ಸಂವಹನ” ಎಂಬ ವಿಷಯಗಳ ಕುರಿತು ಗೋಷ್ಠಿ ಹಾಗೂ ಸಂವಾದ ನಡೆಯಲಿದೆ.


ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಪತ್ರಕರ್ತರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಈ ತರಬೇತಿಯು ಪತ್ರಕರ್ತರ ವೃತ್ತಿಕೌಶಲ್ಯವನ್ನು ಉತ್ತಮ ಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.


ಕಲ್ಯಾಣ ಕರ್ನಾಟಕದ ಇತರ ಜಿಲ್ಲೆಗಳಿಂದ ಆಗಮಿಸುವ ಮುಂಚಿತವಾಗಿಯೇ ನೋಂದಾಯಿಸಿಕೊAಡಿರುವ ಪತ್ರಕರ್ತರಿಗೆ ತರಬೇತಿ ದಿನದಂದು ವಸತಿ ಸೌಲಭ್ಯ ಒದಗಿಸಲಾಗುವುದು. ಆಸಕ್ತರು  https://forms.gle/uwoA67T1b5gBPDuB8  ಗೂಗಲ್ ಫಾರ್ಮ್ ಭರ್ತಿ ಮಾಡಿ ಆಗಸ್ಟ್ 2 ರೊಳಗೆ ನೋಂದಾಯಿಸಿಕೊಳ್ಳುವAತೆ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!