ರಾಯಚೂರು.01.ಆಗಸ್ಟ್.25: ಕರ್ನಾಟಕ ಮಾಧ್ಯಮ ಅಕಾಡೆಮಿಯು ದಿನಾಂಕ 6-8-2025 ರಂದು ಬೀದರ್‌ನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಪರಿಸರ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರದ ಕುರಿತು ಮಾತನಾಡಲಿದ್ದಾರೆ. ಪೌರಾಡಳಿತ ಸಚಿವ ಶ್ರೀ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತರಬೇತಿ ಕಾರ್ಯಕ್ರಮದಲ್ಲಿ “ನ್ಯೂಸ್ ರೂಂ ನಲ್ಲಿ ಎಐ ಮತ್ತು ನಾನು” ಹಾಗೂ “ಸುದ್ದಿಯಲ್ಲಿ ನಿಖರತೆ ಮತ್ತು ಪರಿಣಾಮಕಾರಿ ಸಂವಹನ” ಎಂಬ ವಿಷಯಗಳ ಕುರಿತು ಗೋಷ್ಠಿ ಹಾಗೂ ಸಂವಾದ ನಡೆಯಲಿದೆ.
ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಪತ್ರಕರ್ತರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಈ ತರಬೇತಿಯು ಪತ್ರಕರ್ತರ ವೃತ್ತಿಕೌಶಲ್ಯವನ್ನು ಉತ್ತಮ ಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಇತರ ಜಿಲ್ಲೆಗಳಿಂದ ಆಗಮಿಸುವ ಮುಂಚಿತವಾಗಿಯೇ ನೋಂದಾಯಿಸಿಕೊAಡಿರುವ ಪತ್ರಕರ್ತರಿಗೆ ತರಬೇತಿ ದಿನದಂದು ವಸತಿ ಸೌಲಭ್ಯ ಒದಗಿಸಲಾಗುವುದು. ಆಸಕ್ತರು https://forms.gle/uwoA67T1b5gBPDuB8 ಗೂಗಲ್ ಫಾರ್ಮ್ ಭರ್ತಿ ಮಾಡಿ ಆಗಸ್ಟ್ 2 ರೊಳಗೆ ನೋಂದಾಯಿಸಿಕೊಳ್ಳುವAತೆ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…