ಬೀದರ.07.ಫೆಬ್ರುವರಿ.25: -ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಬೀದರ ನಗರ ಹಾಗೂ ತಾಲ್ಲೂಕಿನ ವಿವಿಧ ಅಂಗನವಾಡಿ ಕೇಂದ್ರ ಮತ್ತು ಕಿತ್ತೂರು ರಾಣಿ, ಮಹಿಳಾ ಮಂಡಳ ಸ್ವಯಂ ಸೇವಾ ಸಂಸ್ಥೆ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ಸ್ವಾಧಾರ ಕೇಂದ್ರಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವರು ಬೀದರ ನಗರದ ನಯಾಕಮಾನ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿನ ಫಲಾನುಭವಿಯ ಮನೆ ಭೇಟಿ ನೀಡಿ ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯ ಕುರಿತು ಪ್ರೋತ್ಸಾಹಧನ ತಲುಪಿರುವ ಬಗ್ಗೆ ಪರಿಶೀಲನೆ ಮಾಡಿದರು ಹಾಗೂ ಸದರಿ ಯೋಜನೆಯ ಕುರಿತು ಫಲಾನುಭವಿಗಳೊಂದಿಗೆ ಚರ್ಚಿಸಿದರು. ಅದೇ ರೀತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜನನಿ ಸುರಕ್ಷ ಯೋಜನೆ, ಚುಚ್ಚು ಮದ್ದಿನ ನೀಡಿರುವ ಕುರಿತು ಮಕ್ಕಳನ್ನು ಪರಿಕ್ಷಿಸಿದರು.
ಬೀದರ ನಗರ ಚೀಮಕೋರಗಲ್ಲಿ ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳೊಂದಿಗೆ ತುಸು ಕಾಲ ಸಮಯ ಕಳೆದರು. ಕೇಂದ್ರದಲ್ಲಿ ಅಳವಡಿಸಿರುವ ವಿವಿಧ ಚಾರ್ಟಗಳನ್ನು ಮಕ್ಕಳಿಗೆ ತೋರಿಸಿ ಹೆಸರು ಹೇಳಲು ಸೂಚಿಸಿದಾಗ ಮಕ್ಕಳು ಅವುಗಳ ಹೆಸರು ಹೇಳಿದರು. ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ ಪೋಷಣ ಟ್ರಾಕರ್ ದಾಖಲಾತಿ ಹಾಗೂ ತೂಕ, ಎತ್ತರ ಪರಿಶೀಲನೆ ಹಾಗೂ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುವ ಉಪಾಹಾರ ಮತ್ತು ಕೋಳಿ ಮೊಟ್ಟೆಗಳನ್ನು ನೀಡಿರುವ ಬಗ್ಗೆ ಪರಿಶೀಲನೆ ಮಾಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ ಅವರು ಅಂಗನವಾಡಿಗಲ್ಲಿನ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಬೀದರ ತಾಲ್ಲೂಕಿನಲ್ಲಿ 11,476 ಗರ್ಭೀಣಿಯರು ನೋಂದಣಿ ಮಾಡಿಕೊಂಡಿದ್ದು, ಇವರೆಲ್ಲರೂ ತಾಯಿ ಕಾರ್ಡು ಪಡೆದುಕೊಂಡಿರುವುದರ ಬಗ್ಗೆ ಹಾಗೂ ಮಕ್ಕಳಿಗೆ ಚುಚ್ಚು ಮದ್ದು ನೀಡಿರುವ ಬಗ್ಗೆ ಪರಿಶೀಲನೆ ಮಾಡಿ ಎಲ್ಲ ಗರ್ಭೀಣಿಯರಿಗೆ ತಾಯಿ ಕಾರ್ಡು ಸಿಗುವಂತೆ.
ಚಿಕಿತ್ಸೆ ವಿವರಗಳನ್ನು ತಾಯಿ ಕಾರ್ಡನಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ತಾಲ್ಲೂಕಾ ಆರೋಗ್ಯ ಅಧಿಕಾರಿ ಸಂಗಾರೆಡ್ಡಿ ಅವರಿಗೆ ಸೂಚನೆ ನೀಡಿದರು.
ಬೀದರ ತಾಲ್ಲೂಕಿನಲ್ಲಿ ಕಿತ್ತೂರು ರಾಣಿ, ಮಹಿಳಾ ಮಂಡಳ, ಸ್ವಯಂ ಸೇವಾ ಸಂಸ್ಥೆ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ಸ್ವಾಧಾರ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಫಲಾನುಭವಿಗಳ ಜೊತೆ ಸಂವಾದ ನಡೆಸಿ ಕೇಂದ್ರದಲ್ಲಿ ನೀಡುತ್ತಿರುವ ಸೌಕರ್ಯಗಳ ಕುರಿತು ಚರ್ಚಿಸಿದರು. ಹಾಗೂ ಹೊಲಿಗೆ ಯಂತ್ರ ತರಬೇತಿ ಪಡೆದ ಸಂಗೀತಾ ಎಂಬ ಫಲಾನುಭವಿಯ ಮನೆ ಭೇಟಿ ನೀಡಿ ಪರಿಶೀಲಿಸಿದರು.
ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಿಂದ ಯಾವುದೇ ಫಲಾನುಭವಿಯು ಹೊರಗುಳಿಯದಂತೆ ನೋಡಿಕೊಳ್ಳುವಂತೆ ಉಪಸ್ಥಿತರಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರ ಸಭೆ ಸಿಬ್ಬಂದಿಗಳಿಗೆ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಿದರು.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…