Home » ಲೈವ್ ನ್ಯೂಸ್ » ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ Backlong ಹುದ್ದೆಗಳ ಭರ್ತಿಗೆ ಚರ್ಚೆ!

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ Backlong ಹುದ್ದೆಗಳ ಭರ್ತಿಗೆ ಚರ್ಚೆ!

ಬೆಂಗಳೂರು.ರಾಜ್ಯಾದ್ಯಂತ ಸರ್ಕಾರಿ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್‌ಲಾಗ್ (Backlong) ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ‌ ನಡೆಯುತ್ತಿದೆ’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಹೇಳಿದರು. ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ 6ನೇ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ‘ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ  ಅವಧಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು.

ಈಗ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಭರ್ತಿ ಮಾಡಲಾಗುವುದು’ ಎಂದು ಹೇಳಿದರು.

‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ’ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

‘ನಿಮ್ಮ ಶಕ್ತಿ ಪ್ರದರ್ಶನ ಸಾಲದು. ಸಮಾಜದ ಬದಲಾವಣೆ ಬಗ್ಗೆ ನಿಮ್ಮ ಧ್ವನಿ, ಕಳಕಳಿ ಎಲ್ಲಿದೆ ಎಂಬ ಪ್ರಶ್ನೆ ಮೂಡುತ್ತದೆ. ಸರ್ಕಾರವು ಮಾನ್ಯತೆ ನೀಡಬೇಕಾದರೆ ಸಂಘಟನೆಯು ಮತ್ತಷ್ಟು ಗಟ್ಟಿಯಾಗಬೇಕು. ಎಲ್ಲರೂ ಒಟ್ಟಾಗಿ ಸಮಾವೇಶ ಮಾಡಬೇಕು. ಸರ್ಕಾರಿ ನೌಕರರ ಸಮಾವೇಶದಲ್ಲಿ ನಿಮಗೆ ಪ್ರಾಶಸ್ತ್ಯ ನೀಡಬೇಕಾಗಿತ್ತು. ಸಮುದಾಯದಲ್ಲಿ ಲಕ್ಷಕ್ಕೂ ಹೆಚ್ಚು ನೌಕರರಿದ್ದರೂ ನಿಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ನೀಡಲಿಲ್ಲ’ ಎಂದು ವಿಷಾದಿಸಿದರು.

ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಶಕ್ತಿ ನಿಮಗೆ ಅರ್ಥವಾಗಿಲ್ಲ. ಮೀಸಲಾತಿಯಿಂದ ನೌಕರಿ ಸಿಕ್ಕಿದೆ. ಸಂಬಳ ಬರುತ್ತದೆ. ಹೆಂಡತಿ ಮಕ್ಕಳನ್ನು ಸಾಕುತ್ತೇವೆ ಎಂದರೆ ಸಾಲುವುದಿಲ್ಲ. ಸಮುದಾಯ ಇಂದಿನವರೆಗೂ ಶೋಷಿತ ಸಮುದಾಯವಾಗಿ ಉಳಿದಿರುವ ಬಗ್ಗೆ ಚಿಂತಿಸಬೇಕು’ ಎಂದರು.

‘ಸಮಾವೇಶಕ್ಕೆ ಸಮುದಾಯದ ಎಲ್ಲ ಸಚಿವರು, ಶಾಸಕರು ಬಂದಿದ್ದರೆ ಬಲ ಬರುತ್ತಿತ್ತು. ನಾನು ಮತ್ತು ಸಚಿವ ಕೆ.ಎಚ್.ಮುನಿಯಪ್ಪ ನಿಮ್ಮ ಪರವಾಗಿ ಹೋರಾಡುತ್ತೇವೆ’ ಎಂದು ಭರವಸೆ ನೀಡಿದರು.

ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.ನರೇಂದ್ರ, ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷ ಡಿ.ಶಿವಶಂಕರ್ ಪಾಲ್ಗೊಂಡರು.

ಇದೇ ಸಂದರ್ಭದಲ್ಲಿ 19 ಬೇಡಿಕೆಗಳ ಮನವಿ ಪತ್ರವನ್ನು ಸಮನ್ವಯ ಸಮಿತಿಯ ಪ್ರಮುಖರು ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಸಲ್ಲಿಸಿದರು.

ಜಿ.ಪರಮೇಶ್ವರ ಉಪ ಮುಖ್ಯಮಂತ್ರಿಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿ ಶಿವಕುಮಾರ್ ಅವರು ತಾತ್ವಿಕವಾಗಿ ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಅನುಷ್ಟಾನಗೊಳಿಸಲಾಗುವುದು
ಬೇಡಿಕೆ ಈಡೇರಿಸಲು ಪ್ರಯತ್ನ: ಮುನಿಯಪ್ಪ

‘ಪರಿಶಿಷ್ಟ ಸಮುದಾಯದ ನೌಕರರ ಬೇಡಿಕೆಗಳನ್ನು ಈಡೇರಿಸಲು ಜಿ.ಪರಮೇಶ್ವರ ಅವರೊಂದಿಗೆ ಸೇರಿ ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ‌ ಭರವಸೆ ನೀಡಿದರು. ಸಮಾವೇಶದಲ್ಲಿ ಮಾತನಾಡಿ ‘ಸಮುದಾಯದ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಹೋಬಳಿಗೊಂದು ವಸತಿ ಶಾಲೆ ಸ್ಥಾಪನೆಯಿಂದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಿದೆ’ ಎಂದರು.

Author

ಪ್ರಮುಖ ಸುದ್ದಿ

Stock market

Astrology