18/06/2025 1:56 PM

Translate Language

Home » ಲೈವ್ ನ್ಯೂಸ್ » ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ.18.ಜೂನ್.25:-ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಸಂಸ್ಥೆಯಲ್ಲಿ ತಲಾ 30 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿAಗ್ ತರಬೇತಿ, ಮಹಿಳಾ ಹೊಲಿಗೆ ತರಬೇತಿ ಮತ್ತು ಬ್ಯೂಟಿ ಪಾರ್ಲರ್ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತದೆ. ಅರ್ಜಿದಾರರಿಗೆ ಜೂನ್ 19 ರಂದು ಸಂದರ್ಶನ ನಡೆಯಲಿದ್ದು, ಜೂನ್ 21 ರಿಂದ ತರಬೇತಿ ಪ್ರಾರಂಭಿಸಲಾಗುವುದು.  ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.

ಆಸಕ್ತರು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮಾರ್ಕ್ಸ್ ಕಾರ್ಡ್ಗಳ ಜರಾಕ್ಸ್ ಪ್ರತಿಗಳು ಹಾಗೂ ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08539-231038, 9483618178, 9481085217, 7259073827, 9538096796 ಗೆ ಸಂಪರ್ಕಿಸಬಹುದು ಎಂದು ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!