ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ.18.ಜೂನ್.25:-ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಸಂಸ್ಥೆಯಲ್ಲಿ ತಲಾ 30 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿAಗ್ ತರಬೇತಿ, ಮಹಿಳಾ ಹೊಲಿಗೆ ತರಬೇತಿ ಮತ್ತು ಬ್ಯೂಟಿ ಪಾರ್ಲರ್ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತದೆ. ಅರ್ಜಿದಾರರಿಗೆ ಜೂನ್ 19 ರಂದು ಸಂದರ್ಶನ ನಡೆಯಲಿದ್ದು, ಜೂನ್ 21 ರಿಂದ ತರಬೇತಿ ಪ್ರಾರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.
ಆಸಕ್ತರು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮಾರ್ಕ್ಸ್ ಕಾರ್ಡ್ಗಳ ಜರಾಕ್ಸ್ ಪ್ರತಿಗಳು ಹಾಗೂ ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08539-231038, 9483618178, 9481085217, 7259073827, 9538096796 ಗೆ ಸಂಪರ್ಕಿಸಬಹುದು ಎಂದು ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…