|

ವಿವಿಧ ಯೋಜನೆಗಳು ಹಾಗೂ ಸಾಲ ಮತ್ತು  ಸಹಾಯಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು.28.ಸೆಪ್ಟೆಂಬರ್.25:-  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪೆÇ್ರೀತ್ಸಾಹ ಯೋಜನೆ, ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸಾಂತ್ವನ ಯೋಜನೆ ಹಾಗೂ ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು (KMDC) ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ, ವಿದೇಶಿ ಶಿಕ್ಷಣ ಸಾಲ, ಮತ್ತು ವೃತ್ತಿ ಪ್ರೋತ್ಸಾಹಗಳಿಗೆ ಅರ್ಹ ಅಲ್ಪಸಂಖ್ಯಾತ ಸಮುದಾಯದ ಜನರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ವಿಧಾನ:
ವೆಬ್‌ಸೈಟ್‌ಗೆ ಭೇಟಿ ನೀಡಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್ kmdconline.karnataka.gov.in/Portal/login ಗೆ ಭೇಟಿ ನೀಡಿ.

ವೆಬ್‌ಸೈಟ್‌ಗೆ ಭೇಟಿ ನೀಡಿ:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್ kmdconline.karnataka.gov.in/Portal/login ಗೆ ಭೇಟಿ ನೀಡಿ.

ಅರ್ಜಿ ಪ್ರಾರಂಭಿಸಿ: ನೀವು ಅರ್ಜಿ ಸಲ್ಲಿಸಲು ಬಯಸುವ ಯೋಜನೆಗೆ ಸಂಬಂಧಿಸಿದ “ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ” ಲಿಂಕ್ ಅನ್ನು ಕ್ಲಿಕ್ ಮಾಡಿ.

ಮೊಬೈಲ್ ಸಂಖ್ಯೆ ಪರಿಶೀಲಿಸಿ: ನಿಮ್ಮ ಆಧಾರ್-ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, OTP ಮೂಲಕ ಆಧಾರ್ ಪರಿಶೀಲಿಸಿ.

ಯೋಜನೆ ಮತ್ತು ವಿವರಗಳು: ಪರಿಶೀಲನೆಯ ನಂತರ, ಸಂಬಂಧಿತ ಯೋಜನೆಯನ್ನು ಆಯ್ಕೆಮಾಡಿ, ನಿಮ್ಮ ವಿವರಗಳು ಮತ್ತು ಆಧಾರ್ ಮಾಹಿತಿಯನ್ನು ಭರ್ತಿ ಮಾಡಿ.

ದಾಖಲೆಗಳನ್ನು ಅಪ್‌ಲೋಡ್ ಮಾಡಿ: ಪಾಸ್‌ಪೋರ್ಟ್ ಗಾತ್ರದ ಫೋಟೋ, ಶೈಕ್ಷಣಿಕ ದಾಖಲೆಗಳು, ಮತ್ತು ಆದಾಯ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿ ಸಲ್ಲಿಸಿ: ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ, “ಅರ್ಜಿ ಸಲ್ಲಿಸಿ” ಬಟನ್ ಕ್ಲಿಕ್ ಮಾಡಿ ಮತ್ತು ನಿಮ್ಮ ಅರ್ಜಿ ಐಡಿಯನ್ನು ಪಡೆದುಕೊಳ್ಳಿ.

ಯೋಜನೆಗಳು:

ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ.

ವಿದೇಶಿ ವಿದ್ಯಾಭ್ಯಾಸ ಸಾಲ.
ಶ್ರಮಶಕ್ತಿ, ಸ್ವಾವಲಂಬಿ ಸಾರಥಿ, ವೃತ್ತಿ ಪ್ರೋತ್ಸಾಹ, ಮತ್ತು ನೇರಸಾಲ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ.

ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ https:// kmdconline.karnataka.gov.in/ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

Similar Posts

Leave a Reply

Your email address will not be published. Required fields are marked *