ವಿವಿಧ ವಸತಿ ಶಾಲೆಗಳಲ್ಲಿ ಆರನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಸಮಿತಿ ರಚನೆ



ಬೀದರ.04.ಜೂನ್.25:- ಕರ್ನಾಟಕ ಸರ್ಕಾರದ ಆದೇಶದನ್ವಯ ಕ್ರೈಸ್ ಅಡಿಯಲ್ಲಿ ಬೀದರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ

1)ಮೊರಾರ್ಜಿ ದೇಸಾಯಿ/

2)  ಅಟಲ್ ಬಿಹಾರಿ ವಾಜಪೇಯಿ /

3) ಡಾ.ಬಿ.ಆರ್. ಅಂಬೇಡ್ಕರ್/

4) ಕಿತ್ತೂರು ರಾಣಿ ಚೆನ್ನಮ್ಮ /

5) ಇಂದಿರಾಗಾoಧಿ ವಸತಿ ಶಾಲೆಗಳಲ್ಲಿ

2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳುವುದಕ್ಕೆ ಸಂಬoಧಿಸಿದoತೆ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಪ್ರವೇಶ ಪರೀಕ್ಷೆ ನಡೆಸಿ ಅಂಕಗಳ (ಮೆರಿಟ್) ಆಧಾರದ ಮೇಲೆ ಸರ್ಕಾರದ ನಿಗದಿಪಡಿಸಿದ ಮೀಸಲಾತಿಯನ್ವಯ ಪ್ರವೇಶ ನೀಡಲಾಗುತ್ತಿದೆ.

ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಸೀಟು ಹಂಚಿಕೆ ಮಾಡಿದ ಮೇಲೆ ಉಳಿದ ಖಾಲಿಯಿರುವ ಸ್ಥಾನಗಳ ತುಂಬುವಲ್ಲಿ ಬಹಳಷ್ಟು ದೂರುಗಳು, ಆಕ್ಷೇಪಣೆಗಳು ಬರುತ್ತಿವೆ.

ಹೀಗಾಗಿ 6ನೇ ತರಗತಿ ಮತ್ತು ಇತರ ತರಗತಿಗಳಲ್ಲಿ ಖಾಲಿಯಿರುವ ಸೀಟುಗಳನ್ನುಮೀಸಲಾತಿ ಮತ್ತು ಮೇರಿಟ್ ಅನ್ವಯ ಆಯ್ಕೆ ಮಾಡಲು ಸರ್ಕಾರ ಆಯಾ ಜಿಲ್ಲೆಗಳ ಕಂದಾಯ ಉಪ ವಿಭಾಗಗಳ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮೀತಿಯನ್ನು ರಚನೆ ಮಾಡಿದೆ.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಪ್ರಾಂಶುಪಾಲರು, ಹಿರಿಯ ಶಿಕ್ಷಕರು ಸಮಿತಿ ಸದಸ್ಯರಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ದಾಖಲಾತಿಗಾಗಿ ಮಕ್ಕಳನ್ನು ಆಯ್ಕೆ ಮಾಡುವಾಗ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಅಂಕಗಳು (ಮೆರಿಟ್) ಆಧಾರದ ಮೇಲೆ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಯಾವುದೇ ಶಿಫಾರಸ್ಸುಗಳನ್ನು ಪರಿಗಣಿಸದೇ ಆಯ್ಕೆ ಮಾಡಲಾಗುತ್ತದೆ.


ಜೊತೆಗೆ ವಿಶೇಷ ವರ್ಗಗಳ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪರೀಕ್ಷೆ ಇಲ್ಲದೆ ನೇರ ದಾಖಲಾತಿ ನೀಡುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಈ ಬಗ್ಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಿಸೌಕರ್ಯವಂಚಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಸರ್ಕಾರದ ಘನ ಉದ್ದೇಶ ಈಡೇರಿಸುವ ನಿಟ್ಟಿನಲ್ಲಿ ಅವಶ್ಯಕತೆಯಿರುವ ಪ್ರತಿಯೊಬ್ಬ ಮಗು ಈ ಸೌಲಭ್ಯ ಪಡೆಯಲು ಕ್ರಮ ವಹಿಸಲಾಗಿದೆ.

ಸರ್ಕಾರದ ಈ ಸೌಲಭ್ಯವನ್ನು ಕೆಲವು ಜನ ದುರುಪಯೋಗ ಪಡಿಸಿಕೊಂಡು ನಕಲು ಮತ್ತು ನೈಜತೆಯಿಲ್ಲದ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ಪ್ರವೇಶ ಕೋರಿ ಶಾಲೆಗೆ ಬರುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿವೆ.

ಇದರಿಂದ ಘನ ಸರ್ಕಾರದ ನೈಜ ಉದ್ದೇಶಕ್ಕೆ ಧಕ್ಕೆ ಬರುವುದಲ್ಲದೆ ನಿಜವಾದ ಅವಶ್ಯಕತೆ ಇರುವ ಮಕ್ಕಳಿಗೆ ಅವರ ಅವಕಾಶದಿಂದ ವಂಚಿಸಿದoತಾಗುತ್ತದೆ.

ಇದನ್ನು ಗಂಭೀರವಾಗಿ ಪರಗಣಿಸಿ ಸಂಬoಧಿಸಿದ ಪ್ರಾಧೀಕಾರದಿಂದ ನೀಡಲಾದ ನೈಜ ಪ್ರಮಾಣ ಪತ್ರದ ದೃಢಪಡಿಸಿಕೊಂಡು ಪ್ರವೇಶ ನೀಡಲಾಗುವುದು. ಪರಿಶೀಲನೆ ಮಾಡುವ ಸಂದರ್ಭದಲ್ಲಿ ಪ್ರಮಾಣ ಪತ್ರ ಸುಳ್ಳೆಂದು ಸಾಬೀತಾದಲ್ಲಿ ಪ್ರವೇಶ ರದ್ದು ಪಡಿಸಿ ಪ್ರಮಾಣ ಪತ್ರ ಸಲ್ಲಿಸಿದವರ ಮತ್ತು ನೀಡಿದವರ ಮೇಲೆ ಕಾನೂನು ರಿತ್ಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು.


ಕಾರಣ ಸಾರ್ವಜನಿಕರು ಮಧ್ಯವರ್ತಿಗಳಿಂದ ಯಾವುದೇ ರೀತಿ ವಂಚನೆಗೊಳಗಾಗಬಾರದೆoದು ಅವರು ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago