ಬೀದರ 19ಜನವರಿ.25:- ಕರ್ನಾಟಕ ವಸತಿ ಶೀಕ್ಷಣ ಸಂಸ್ಥೆಗಳ ಸಂಘದ ಅಧೀನದ ಬೀದರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್ ಅಂಬೇಡ್ಕರ ಹಾಗೂ ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಸ್ಥಾನಗಳನ್ನು ಭರ್ತಿ ಮಾಡಲು ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ಶಾಲೆಗೆ ಅರ್ಜಿ ಸಲ್ಲಿಸುವ ಹಿಂದುಳಿದ ವರ್ಗದ 2ಎ,2ಬಿ,3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿರುವ ವಿದ್ಯಾರ್ಥಿಗಳ ವಾರ್ಷಿಕ ವರಮಾನ ರೂ. 1,00,000 ಒಳಗಿರಬೇಕು. ಎಸ್.ಸಿ, ಎಸ್.ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 2,50,000 ಒಳಗಿರಬೇಕು. ಅರ್ಜಿಗಳನ್ನು ಹತ್ತಿರದ ವಸತಿ ಶಾಲೆಯಿಂದ ಅಥವಾ www.kreis.kar.nic.in ಈ ವೆಬ್‌ಸೈಟ್‌ನಲ್ಲಿ ಪಡೆಯಬಹುದು.
Qಅರ್ಜಿಗಳನ್ನು ತುಂಬಿ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರಿಗೆ ದಿನಾಂಕ: 25-01-2025ರ ಸಂಜೆ 5:30 ರ ಒಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲಾ.
ಪ್ರವೇಶ ಪರೀಕ್ಷೆಯು ಆಯಾ ತಾಲ್ಲೂಕಾ ಕೇಂದ್ರಗಳಲ್ಲಿ ದಿನಾಂಕ: 15-02-2025 ರಂದು ಮಧ್ಯಾಹ್ನ 2.30 ಗಂಟೆಗೆ ನಡೆಸಲಾಗುತ್ತದೆ. ಪರೀಕ್ಷೆಗೆ 5ನೇ ತರಗತಿಯ ಹಿಂದಿ ವಿಷಯ ಹೊರತು ಪಡಿಸಿ ಉಳಿದ 5 ವಿಷಯಗಳಿಗೆ ತಲಾ 20 ಅಂಕಗಳ ಪ್ರಶ್ನೆಗಳು ಇರುತ್ತವೆ.
ಅನ್‌ಲೈನ್ ಮೂಲಕ ತಾವು ಅಯ್ಕೆ ಮಾಡಿಕೊಂಡ ಶಾಲಾ ಆದ್ಯತೆಯಂತೆ ಮೇರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರೀಯೆ ನಡೆಯುವುದರಿಂದ ಯಾವುದೇ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ವಸತಿ ಶಾಲೆ ಇಲ್ಲವೇ 7899998755, 9945196115, 9986850550 ಈ ಮೊಬೈಲ್ ನಂಬರಗಳಿಗೆ ಸಂಪರ್ಕಿಸಬಹುದುದಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…