ವಿವಿಧ ಸರ್ಕಾರಿ ಇಲಾಖೆಗಳಿಗೆ ವಿದ್ಯಾರ್ಥಿಗಳ ಭೇಟಿ* ಒಂದು ದಿನಕ್ಕೆ ಅಧಿಕಾರಿಗಳಾದ ವಿದ್ಯಾರ್ಥಿಗಳು!


ಬೀದರ, ನವೆಂಬರ್.25 :- ಶಾಲಾ ಶಿಕ್ಷಣದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತೇಜನ ನೀಡುವುದರ ಜೊತೆ ಸರಕಾರಿ ಇಲಾಖೆಗಳ ವ್ಯವಸ್ಥೆಯ ಪ್ರಯೋಗಿಕ ಅನುಭವ ಪಡೆದುಕೊಂಡ ಕಾರ್ಯಕ್ರಮ ಶ್ಲಾಘನೀಯವಾದದ್ದು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯೇ ಎಲ್ಲರ ಗುರಿಯಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಸ ಬನಸೋಡೆ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಅಶ್ರಯದಲ್ಲಿಂದು ಡಾ.ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳೊಂದಿಗೆ ಸಂವಾದ ಹಾಗೂ ಅಂತರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಸರಕಾರದ ಕಾರ್ಯವೈಖರಿ, ವ್ಯವಸ್ಥೆ ಬಗ್ಗೆ ತಿಳಿದುಕೊಂಡು ವಿದ್ಯಾರ್ಥಿಗಳಲ್ಲಿ ಹೊಸ ಅನುಭವ ನೀಡಿದೆ. ಇದರಿಂದ ಶಾಲಾ ಮಕ್ಕಳಿಗೆ ಆಡಳಿತ ಕಾರ್ಯವೈಖರಿ, ಸರಕಾರದ ಯೋಜನೆಗಳು, ಅಭಿವೃದ್ಧಿ ಕಾರ್ಯ ತಿಳಿದುಕೊಂಡು ಆತ್ಮವಿಶ್ವಾಸ ಮೂಡಿಸದೆಯೆಂದರು.
ದೇಶ ಪ್ರಗತಿಯಾಗಬೇಕಾದರೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯೇ ಮುಖ್ಯ. ಮಕ್ಕಳ ಹಕ್ಕುಗಳ ಬಗ್ಗೆ ಜಾಋತಿ ಮೂಡಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಸರಕಾರವು ಮಕ್ಕಳ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಉಚಿತ ವಸತಿ, ಆಹಾರ ಸಾಲ ಸೌಲಭ್ಯ ನೀಡುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕೆಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವುದು ಹೊಸ ಅನುಭವ ನೀಡಿದೆ. ಅನೇಕ ವಿದ್ಯಾರ್ಥಿಗಳು ಡಾಕ್ಟರ, ಇಂಜಿನೀಯರ್ ಆಗಬೇಕೆಂದು ತಿಳಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಅವಕಾಸವಿದೆ. ಮಕ್ಕಳು ತಮ್ಮ ಆಸಕ್ತಿ ಸಾಮರ್ಥ್ಯ ತಿಳಿದುಕೊಂಡು ಗುರಿ ಹಾಕಿಕೊಂಡು ಸಾಧನೆ ಮಾಡಬೇಕು. ಸತತ ಪರಿಶ್ರಮ ಒಂದೇ ದಾರಿ, ಯಶಸ್ಸು ದೊರೆಯುವವರೆಗೆ ತಾಳ್ಮೆ ಕಳೆದುಕೊಳ್ಳದೇ ಮತ್ತೆ ಮತ್ತೆ ಪ್ರಯತ್ನಿಸಬೇಕು. ಸೋಲಿಗೆ ಎದೆಗುಂದಬಾರದೆAದರು. ಆಧುನಿಕ ಸಾಮಾಜಿಕ ಜಾಲತಾಣವನ್ನು ಉತ್ತಮ ಬೆಳವಣಿಗೆಗೆ ಮಾತ್ರ ಬಳಸಿಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಮ್ಮ ಐಎಎಸ್ ಪರಿಶ್ರಮದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊAಡರು. ಇಂದು ವಿದ್ಯಾರ್ಥಿಗಳು ವಿವಿಧ ಇಲಖೆಗಳ ಕಾರ್ಯವೈಖರಿಯನ್ನು ಅನುಭವಿಸಿ ಉತ್ತಮವಾಗಿ ನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಯಶಸ್ವಿನತ್ತ ಸತತ ಪರಿಶ್ರಮ ಮಾಡಬೇಕು. ಯಶಸ್ಸು ದೊರೆಯದಿದ್ದಾಗ ಅಡ್ಡದಾರಿ ಹಿಡಿಯಬಾರದು ಸತತ ಪ್ರಯತ್ನ ಮಾಡುತ್ತಿರಬೇಕೆಂದು ತಿಳಿಸಿದರು.
ಸರಕಾರಿ ಆದರ್ಶ ವಿದ್ಯಾಲಯದ ವೈಷ್ಣವಿ ಪಾಟೀಲ, ತಾಲೂಕಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತಮ್ಮ ಅನುಭವ ಹಂಚಿಕೆAಡಳು. ಜೀಜಾಮಾತಾ ಕನ್ಯಾ ಪ್ರೌಢ ಶಾಲೆಯ ಸಂಜನಾ ನಡುವಿನದೊಡ್ಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಹುದ್ದೆಯ ಅನುಭವ ಹಂಚಿಕೊAಡು ಅನಾಥ ಮಕ್ಕಳ ನಿಲಯಕ್ಕೆ ಭೇಟಿ ನೀಡಿ ವ್ಯವಸ್ಥೆಯನ್ನು ಶ್ಲಾಘಿಸಿದಳು. ಮೊದಮಮ ನುಮಾನ ವಿದ್ಯಾರ್ಥಿ ಸಮಾಜ ಕಲ್ಯಾಣಾಧಿಕಾರಿ ಹಾಗೂ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ಸೃಷ್ಠಿ ರಾಜಕುಮಾರ ಕಂದಗುಳೆ ಜಂಟಿ ಕೃಷಿ ನಿರ್ದೇಶಕರ ಹುದ್ದೆಯ ಅನುಭವ ಹಂಚಿಕೊಳ್ಳುತ್ತಾ ರೈತರಿಗೆ ಬೀಜ ವಿತರಣೆ ಉತ್ತಮ ವ್ಯವಸ್ಥೆಯನ್ನು ತಿಳಿಸಿದಳು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಲೀಂಪಾಶಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿಂಧು ಎಚ್.ಎಸ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಸಂಗೀತಾ ಬಿರಾದಾರ, ಜಿಲ್ಲಾ ಸಾಂಖ್ಯಿತ ಅಧಿಕಾರಿಗಳಾದ ಸುವಣಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ ಎಂ.ಎಸ್., ಜಿಲ್ಲಾ ಮಟ್ಟದ ರಕ್ಷಣಾ ಅಧಿಕಾರಿಗಳಾದ ಗುರುರಾಜ, ವಿವಿಧ ಇಲಾಖೆ ಅಧಿಕಾರಿಗಳು ಸೇರಿದದಂತೆ ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.

ವಿವಿಧ ಸರ್ಕಾರಿ ಇಲಾಖೆಗಳಿಗೆ ವಿದ್ಯಾರ್ಥಿಗಳ ಭೇಟಿ
* ಒಂದು ದಿನಕ್ಕೆ ಅಧಿಕಾರಿಗಳಾದ ವಿದ್ಯಾರ್ಥಿಗಳು
*ಮಕ್ಕಳಲ್ಲಿ ಉತ್ಸಾಹ, ಹುಮ್ಮಸ್ಸು ಹೊಸ ಅನುಭವ ತರಿಸಿದ ಕಾರ್ಯಕ್ರಮ
*ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಅತೀ ಮಹತ್ವ-ನ್ಯಾಯಾಧೀಶ ಪ್ರಕಾಶ ಬನಸೋಡೆ*

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

8 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

11 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

11 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

11 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

11 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

11 hours ago