ಬೀದರ.05.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ಅವರು ಶನಿವಾರ ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವರು 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು 7 ಮಂದಿಗೆ ಶ್ರವಣದೋಷ ಇರುವವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಸೇರಿದಂತೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.