ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಷೇಶ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು ವರ್ಷಗಳ ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.12 .
ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.50(ಎಸ್‌ಸಿ, ಎಸ್‌ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊoದಿಗೆ ತೇರ್ಗಡೆಯಾಗಿರಬೇಕು.
ಈ ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ.
https://nber-rehabcouncil.gov.in
ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ.
ಡಿ.ಇಡಿ.ಎಸ್‌ಪಿಲ್.ಇಡಿ(VI)- ಹೆಲೆನ್ ಕೆಲ್ಲರ್ ಸರ್ಕಾರಿ ಟೀಚರ್ ಟ್ರೆöÊನಿಂಗ್ ಸೆಂಟರ್ ಫಾರ್ ವಿಜುಯಲಿ ಹ್ಯಾಂಡಿಕ್ಯಾಪ್ಡ್-ಕೆಕೆ016, ಡಿ.ಇಡಿ.ಎಸ್‌ಪಿಎಲ್.ಇಡಿ(HI)- ಗವರ್ನ್ಮೆಂಟ್ ಟೀಚರ್ ಟ್ರೆöÊನಿಂಗ್ ಸೆಂಟರ್ ಫಾರ್ ಇಯರಿಂಗ್ ಹ್ಯಾಂಡಿಕ್ಯಾಪ್ಡ್-ಕೆಕೆ015 ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ.
ಈ ತರಬೇತಿಯನ್ನು ಪಡೆದರೆ, ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳರಡರಲ್ಲೂ ಶಿಕ್ಷಕರಾಗಬಹುದು. ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗಬಹುದು. ಸಿಬಿಎಸ್‌ಸಿ ಶಾಲೆಗಳಲ್ಲಿ ಶಿಕ್ಷಕರಾಗಬಹುದು, ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು.
ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ರಿಗಳಾಗಿ ಕಾರ್ಯ ನಿರ್ವಹಿಸಬಹುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು. ರಾಷ್ಟಿçoಯ ಸಂಸ್ಥೆಗಳು/ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಬಹುದು. ಮಾತಿನ ತರಬೇತಿ ಘಟಕದಲ್ಲೂ ಕಾರ್ಯ ನಿರ್ವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 0821 2491600 ಹಾಗೂ ತರಬೇತಿ ಸಂಯೋಜಕರಾದ ಆಶಾ.ವಿ ಹಿರೇಮಠ್-9113561620, ಟಿ.ಡಿ.ಮಂಜುನಾಥ್-9686762378 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.