ವಿಶ್ವಕರ್ಮ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ  ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:

ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು.

ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ ಒಳಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಸಿರಬೇಕು.


ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷ ಮಿತಿಯೊಳಗಿರಬೇಕು.

ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇದೆ.

ನಿಗಮದ ಯೋಜನೆಗಳ ವಿವರ
ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು) ಮತ್ತು (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ (ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷಗಳ ಮಿತಿಯಲ್ಲಿರಬೇಕು), ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆ

(ಈ ಯೋಜನೆಯಡಿ ಅರ್ಜಿ http://www.kaushalkar.com ನಲ್ಲಿ ಸಲ್ಲಿಸಬೇಕು).

ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿ).ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಸೇವಾಸಿಂಧು ಪೋರ್ಟಲ್ನಡಿ ಅರ್ಜಿ ಸಲ್ಲಿಸಬಹುದು.

ವಿಶೇಷ ಸೂಚನೆ:

2023-24 ಹಾಗೂ 2024-25ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದೆ

(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).

ಮಾಹಿತಿಗಾಗಿ ನಿಗಮದ ವೆಬ್ಸೈಟ್:

 https://kvcdcl.karnataka.gov.in

ಅಥವಾ ನಿಗಮದ ಕೇಂದ್ರ ಕಚೇರಿಯ ದೂ.080-22374848, ಮೊ.7899899039 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿ.

ಸಹಾಯವಾಣಿ ಸಂಖ್ಯೆ:08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

37 minutes ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

10 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

15 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

15 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

20 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago