ವಿಶ್ವವಿದ್ಯಾನಿಲಯ 11ನೇ ಘಟಿಕೋತ್ಸವದಲ್ಲಿ,46 ವಿದ್ಯಾರ್ಥಿಗಳು 87 ಚಿನ್ನದ ಪದಕ ಪಡೆದರೆ, 57  ಪಿಎಚ್.ಡಿ.  ಪಡೆಯಲಿದ್ದಾರೆ.

ದಾವಣಗೆರೆ.01.ಏಪ್ರಿಲ್.25:- ದಾವಣಗೆರೆ ವಿಶ್ವವಿದ್ಯಾಲಯೆಲ್ಲಿ ಹನ್ನೊಂದನೇ ಘಟಿಕೋತ್ಸವ ಸಿದ್ಧತೆ ವಿಶ್ವವಿದ್ಯಾಲಯೇಲ್ಲಿ ಸ್ನಾತಕ  ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,048 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. 46 ವಿದ್ಯಾರ್ಥಿಗಳು 87 ಚಿನ್ನದ ಪದಕ ಪಡೆದರೆ, 57 ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ. ಪದವಿಯನ್ನು ಪಡೆಯಲಿದ್ದಾರೆ.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅವರು ಮಾತನಾಡಿ, ಈ ಬಾರಿ ಘಟಿಕೋತ್ಸವದಲ್ಲಿ 21 ಮಹಿಳೆಯರು ಮತ್ತು 36 ಪುರುಷರು ಸೇರಿ ಒಟ್ಟು 57 ಜನರು ಪಿಎಚ್.ಡಿ. ಪದವಿ ಪಡೆಯಲಿದ್ದಾರೆ. ಒಟ್ಟು 23 ವಿವಿಧ ವಿಭಾಗಗಳಲ್ಲಿ ಸಂಶೋಧನೆ ನಡೆಸಿದ್ದಾರೆ. ಆ ಮೂಲಕ ವಿಶ್ವವಿದ್ಯಾನಿಲಯವು ಶಿಕ್ಷಣದ ಜೊತೆಗೆ ಸಂಶೋಧನೆಯಲ್ಲಿಯೂ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಗೌರವ ಪಡೆಯಲು ಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 87 ಸ್ವರ್ಣ ಪದಕಗಳಿದ್ದು, 35 ವಿದ್ಯಾರ್ಥಿನಿಯರು ಮತ್ತು 11 ಪುರುಷರು ಸೇರಿ ಒಟ್ಟು 46 ವಿದ್ಯಾರ್ಥಿಗಳು ಪದಕಗಳನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ಈ ಬಾರಿಯೂ ವಿದ್ಯಾರ್ಥಿನಿಯರೇ ಚಿನ್ನದ ಗಳಿಕೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಇದರಲ್ಲಿ ಸ್ನಾತಕ ಪದವಿಯ 9 ಮತ್ತು ಸ್ನಾತಕೋತ್ತರ ಪದವಿಯ 26 ವಿದ್ಯಾರ್ಥಿನಿಯರು ಈ ಸಾಧನೆ ಮಾಡಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದ ಸ್ನಾತಕ ಪದವಿಯ ವಿವಿಧ ಕೋರ್ಸ್ ಗಳಲ್ಲಿ ಒಟ್ಟು 12,129 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. ಅವರಲ್ಲಿ 7,645 ಮಹಿಳೆಯರು ಮತ್ತು 4,448 ಪುರುಷರು ಪದವೀಧರರಾಗಲಿದ್ದಾರೆ. ಅಲ್ಲದೆ ಸ್ನಾತಕ ಪದವಿಯ ತೇರ್ಗಡೆ ಫಲಿತಾಂಶ ಶೇ 61.14 ರಷ್ಟಾಗಿದೆ ಎಂದು ತಿಳಿಸಿದರು.

ಇನ್ನು ವಿಶ್ವವಿದ್ಯಾನಿಲಯ 24 ಕೋರ್ಸ್ ಗಳಲ್ಲಿ ಒಟ್ಟು 1,919 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲು ಅರ್ಹರಾಗಿದ್ದಾರೆ. ಇವರಲ್ಲಿ 1,192 ಮಹಿಳೆಯರು ಮತ್ತು 727 ಪುರುಷ ವಿದ್ಯಾರ್ಥಿಗಳು ಸೇರಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಶೇ 96.14ರಷ್ಟು ಫಲಿತಾಂಶ ಬಂದಿದೆ.

ರಾಜ್ಯಪಾಲರಿಂದ ಪದವಿ ಪ್ರದಾನ:

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಏಪ್ರಿಲ್ 2ರಂದು ವಿವಿಯಲ್ಲಿ ನಡೆಯುವ 12ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಪಾಲರು ಪದವಿ ಪ್ರದಾನ ಜೊತೆಗೆ, ರ‍್ಯಾಂಕ್ ವಿಜೇತರಿಗೆ 87 ಚಿನ್ನದ ಪದಕ ನೀಡುವರು. 57 ಜನರಿಗೆ ಪಿಎಚ್.ಡಿ. ಪದವಿ ಪ್ರಮಾಣಪತ್ರ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,048 ವಿದ್ಯಾರ್ಥಿಗಳಿಗೆ ಪದವಿ ಘೋಷಣೆ ಮಾಡಲಿದ್ದಾರೆ.

ವಿಶ್ವವಿದ್ಯಾನಿಲಯದ ಗೌರವಾನ್ವಿತ ಸಮಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಉಪಸ್ಥಿತರಿರುವರು. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರು ಎರಡರಿಂದ ಹತ್ತನೇ ರ‍್ಯಾಂಕ್ ವಿಜೇತರಿಗೆ ಪ್ರಮಾಣಪತ್ರ ವಿತರಿಸುವರು. ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ, ಪದ್ಮಭೂಷಣ ಪ್ರೊ.ಪಿ. ಬಲರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.

ಕುಲಸಚಿವ ಪ್ರೊ.ಆರ್.ಶಶಿಧರ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

36 minutes ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

42 minutes ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

45 minutes ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

50 minutes ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

54 minutes ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

58 minutes ago