Home » ಲೈವ್ ನ್ಯೂಸ್ » ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳು ನೇಮಕಾತಿ : ಸಿಎಂ ಭರವಸೆ

ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳು ನೇಮಕಾತಿ : ಸಿಎಂ ಭರವಸೆ

Facebook
X
WhatsApp
Telegram

ಬೆಂಗಳೂರು.01.ಮಾರ್ಚ್.26: ರಾಜ್ಯದಲ್ಲಿ ವಿವಿಧ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ.

ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರು ಮೌಲ್ಯವರ್ಧನೆಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಿಎಂ, ಪ್ರಸ್ತುತ ಸುಮಾರು ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಇಲಾಖೆಯ ಈ ಕೊರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಳೆದ ವರ್ಷ 2000 ಶಿಕ್ಷಕರನ್ನು ಭರ್ತಿ ಮಾಡಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಶಾಶ್ವತ ನೇಮಕಾತಿ ಆಗುವವರೆಗೆ ಕಾಯಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ಅತಿಥಿ ಉಪನ್ಯಾಸಕರ ಸೇವೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಬದ್ಧವಾಗಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಲಾಗುವುದು ಎಂಬುದು ಮುಖ್ಯ ಹೇಳಿಕೆಯಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology