ವಿಶ್ವವಿದ್ಯಾಲಯಗಳ ಬ್ಯಾಕ್‌ ಲಾಗ್ ಹುದ್ದೆ ಭರ್ತಿಗೆ ಕ್ರಮ: ಜಿ. ಪರಮೇಶ್ವರ

ಬೆಂಗಳೂರು.25.ಜನವರ.25ರಾಜ್ಯದಎಲ್ಲಾ’ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರ ಗ್ರಂಥಾಲಯ, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಶನಿವಾರ ಆಯೋಜಿಸಿದ್ದ ಶತಮಾನದ ಸಮತಾ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ 2.5 ಲಕ್ಷ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಸಂಬಂಧ ನಿರಂತರವಾಗಿ ಸಭೆಗಳನ್ನು ನಡೆಸಲಾಗುತ್ತಿದೆ. ಶೀಘ್ರದಲ್ಲೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಸಮತಾ ಸೈನಿಕ ಸಂಘಟನೆ ಪ್ರಾರಂಭಿಸಿ 100 ವರ್ಷ ಪೂರೈಸಿದೆ. ಶತಮಾನ ಕಳೆದರೂ ಸಂಘಟನೆಯು ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಇಂದಿಗೂ ಸಂಘಟನೆ ಉಳಿದಿರುವುದಕ್ಕೆ ನಾವೆಲ್ಲರೂ ಹೆಮ್ಮೆ ಪಡಬೇಕು. ಬಾಬಾಸಾಹೇಬರ ಪ್ರತಿ ಚಿಂತನೆ, ಆದರ್ಶ,ಆಲೋಚನೆ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರಲಿದೆ’ ಎಂದರು.

ಇದೇ ಸಂದರ್ಭದಲ್ಲಿ ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಅವರಿಗೆ ‘ಸಮತಾ ಸಾರಥಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಶೇಕ್ ಲತೀಫ್, ಶ್ರೀನಿವಾಸ್ ಸಿ., ವಿಶ್ವವಿದ್ಯಾಲಯದ ಗ್ರಂಥಪಾಲಕ ಎಂ.ರಘುನಂದನ, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಸತೀಶ ಜಿ.ಕೆ., ಚಂದ್ರು ಪೆರಿಯಾರ್ ಭಾಗವಹಿಸಿದ್ದರು.

ರಾಜ್ಯದಎಲ್ಲಾ’ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಪ್ರತ್ಯೇಕ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅನುದಾನ ನೀಡ್ಲಿದೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

8 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

8 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

8 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

8 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

8 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago