ವಿಶ್ವ ಅಂಗವಿಕಲರ ದಿನಾಚರಣೆಅಂಗವಿಕಲರಿಗೆ ರೋಟಿ, ಕಪಡಾ, ಮಕಾನ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು-ಸಚಿವ ಈಶ್ವರ ಖಂಡ್ರೆ


ಬೀದರ, 04ಡಿಸೆಂಬರ್24:- ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಶಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸರಕಾರದಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಅರಣ್ಯ, ಪರಿಸರ ಮತ್ತು ಜೀವಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ (ರಿ) ಎಮ್.ಆರ್.ಡಬ್ಲೂö್ಯ., ವಿ.ಆರ್.ಡಬ್ಲೂö್ಯ., ಯು.ಆರ್.ಡಬ್ಲೂö್ಯ., ಸ್ವಯಂ ಸೇವಾ ಸಂಘ ಸಂಸ್ಥೆಗಳ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಡಾ.ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡುತ್ತಾ, ಅಂಗವಿಕಲರ ಅಭಿವೃದ್ಧಿಗಾಗಿ ಅಗತ್ಯ ಸೌಲಭ್ಯಗಳನ್ನು ದೊರಕಿಸಿಕೊಡಲು ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಕೆ.ಕೆ.ಆರ್.ಡಿ.ಬಿ. ವತಿಯಿಂದ ವಿಶೇಷ ಚೇತನರ ಅಭಿವೃದ್ಧಿಗೆ ಒಟ್ಟು ಅನುದಾನದ ಶೇ.5% ರಷ್ಟು ಅನುದಾನವನ್ನು ಮೀಸಲಿಡಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗುವುದು. ಜಿಲ್ಲೆಯ ಎಲ್ಲ ವಿಶೇಷಚೇತನರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ಸರ್ಕಾರದ ವತಿಯಿಂದ ನೀಡುತ್ತಿರುವ ಮಾಶಾಸನವನ್ನು 800 ದಿಂದ 2 ಸಾವಿರಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಅಂಗವಿಕಲರ ಅಭಿವೃದ್ಧಿಗಾಗಿ ಇರುವ ಎಲ್ಲ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಲು ಅಂಗವಿಕಲರ ಕೋಶ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದೆಂದರು.
ಬುದ್ಧಿಮಾಂದ್ಯರು ಸಾಕಷ್ಟು ಒತ್ತಡದಲ್ಲಿದ್ದು, ವಿಶೇಷ ಶಾಲೆಯನ್ನು ಸ್ಥಾಪಿಸಲಾಗುವುದು. ಈಗಾಗಲೇ ಚಾಲ್ತಿಯಲ್ಲಿರುವ ಅಂಧ ಶಾಲೆಗಳಿಗೆ ಹೆಚ್ಚಿನ ಅನುದಾನ ಕೆ.ಕೆ.ಆರ್.ಡಿ.ಬಿ.ಯಿಂದ ನೀಡುವಂತೆ ಕ್ರಮಕೈಗೊಳ್ಳಲಾಗುವುದು ಎಂದರು.
ಬಿ.ಆರ್.ಡಬ್ಲೂö್ಯ., ಎಂ.ಆರ್.ಡಬ್ಲೂö್ಯ. ಅವರ ವೇತನ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. 10ನೇ ತರಗತಿಯವರ ಶುಲ್ಕ ಮರು ಪಾವತಿ ಯೋಜನೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ, ಪಿಯುಸಿ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪಟಾಪ್, ಬ್ರೆöÊಲ್ ಲಿಪಿಯ ಲ್ಯಾಪ್‌ಟ್ಯಾಪ್ ವಿತರಿಸಲು ಈಗಾಗಲೇ ಅಧಿಕಾರಿಗಳು ಕ್ರಮಕೈಗೊಂಡಿರುತ್ತಾರೆ. ವಿಶೇಷಚೇತನರು ರಾಜ್ಯ, ರಾಷ್ಟç ವಿಶ್ವದಾದ್ಯಂತ ಅನೇಕರು ಸಾಧನೆ ಮಾಡಿದ್ದಾರೆ. ಅಂಗವಿಕಲತೆ ಶಾಪವಲ್ಲ, ಅಂಗವಿಕಲತೆಯನ್ನು ಸಮರ್ಪಕವಾಗಿ ಎದುರಿಸಲು ಪೂರಕ ವಾತಾವರಣ ನಾವೆಲ್ಲರೂ ಪಾಲಿಸಬೇಕಿದೆ. ಎಂದರು.
ಎಲ್ಲ ಅಂಗವಿಕಲರು ಖುದ್ದಾಗಿ ಬಂದು ಅರ್ಜಿ ಹಾಕಲು ಆಗುವುದಿಲ್ಲ. ಅಧಿಕಾರಿಗಳು ಮನೆ ಮನೆಗೆ ತೆರಳಿ ಮಾಶಾಸನ ಹಾಗೂ ಇತರೇ ಸೌಲಭ್ಯ ವಿತರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಅನುದಾನದಡಿ 25 ಲಕ್ಷ ರೂ. ಹಾಗೂ ಸಂಸದರಾದ ಸಾಗರ ಖಂಡ್ರೆ ಅವರ ಅನುದಾನದಡಿ 50 ಲಕ್ಷ ರೂ. ಖರ್ಚಿನಲ್ಲಿ ಅಂಗವಿಕಲರಿಗೆ ವಿಶೇಷ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಪೌರಾಡಳಿತ ಮತ್ತು ಹಜ್ ಖಾತೆ ಸಚಿವರಾದ ರಹೀಮ ಖಾನ್ ಅವರು ಮಾತನಾಡಿ, ವಿಶೇಷ ಚೇತನ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ ಯಾವುದೇ ವಿಭಾಗದಲ್ಲಿ ಕಡಿಮೆ ಇರುವುದಿಲ್ಲ ಅವರ ಪ್ರತಿಭೆಯನ್ನು ಪ್ರೋತ್ಸಾಹಿಸಿ ಹೊರ ತರಲು ಅವರನ್ನು ಪೋಷಕರು ಹಾಗೂ ಶಿಕ್ಷಕರು ಸಹಾನುಭೂತಿಯಿಂದ ಸಹಕರಿಸಬೇಕು ಹಾಗೂ ಸರ್ಕಾರದ ವತಿಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ವಿಕಲಚೇತನರಿಗೆ ಅಲಿಮಕೋ ಸಂಸ್ಥೆ ವತಿಯಿಂದ ಸಾಧನ ಸಲಕರಣೆ ಹಾಗೂ ಇಲಾಖೆ ವತಿಯಿಂದ ತ್ರಿಚಕ್ರ ವಾಹನ ನೀಡಲಾಯಿತು. ಅದೇ ರೀತಿ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಧರ ಎಂ., ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಬಲೀಕರಣ ಅಧಿಕಾರಿ ರತ್ನಸುಭಾಷ, ವಿಕಲಚೇತನರ ಸಂಘ ಸಂಸ್ಥೆಗಳ ಅನೀಲ ಬೆಲ್ದಾರ, ರಾಜು ಕಡ್ಯಾಳ ಸೇರಿದಂತೆ ಸಂಘ ಸಂಸ್ಥೆಯ ಪದಾಧಿಕಾರಿಗಳು, ವಿಶೇಷಚೇತನರು ಉಪಸ್ಥಿತರಿದ್ದರು

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

14 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

29 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

40 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago