04 ಡಿಸೆಂಬರ್ 24 ಬೆಂಗಳೂರು:-ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆʼ ಎಂದು ಹೇಳಿದರು.ಸಾಮಾಜಿಕ ಸಬಲೀಕರಣಕ್ಕಾಗಿ ಶೇ.40-74 ವಿಕಲಚೇತನರಿಗೆ 800 ರೂ. ಹಾಗೂ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ 1,400 ರೂ. ಮತ್ತು ತೀವ್ರತರ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ಪ್ರತಿ ತಿಂಗಳು 2000 ರೂ. ಮಾಸಾಶನ ನೀಡಲಾಗುತ್ತಿದೆ. ವಿಕಲಚೇತನರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ. ಮಂಜೂರು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರದಿಂದ ಪತ್ರ ಬರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆʼ ಎಂದು ಹೇಳಿದರು.