05/08/2025 6:56 PM

Translate Language

Home » ಲೈವ್ ನ್ಯೂಸ್ » ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

Facebook
X
WhatsApp
Telegram

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು ಬೆಂಬಲಿಸಲು ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಬೀದರ ಆರ್.ಸಿ.ಹೆಚ್ ಅಧಿಕಾರಿ ಡಾ.ಶಿವಶಂಕರ ಬಿ. ಅವರು ತಿಳಿಸಿದರು.

ಅವರು ಮಂಗಳವಾರ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರ ನೂರು ಹಾಸಿಗೆ ಆಸ್ಪತ್ರೆ ಬೀದರನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ವಿಶ್ವ ಸ್ತನ್ಯಪಾನ ಸಪ್ತಾಹ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಎಲ್ಲೆಡೆ ಜಾಗತಿಕ ಅಭಿಯಾನವಾಗಿ ಆಚರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬೀದರ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರ ನೂರು ಹಾಸಿಗೆ ಆಸ್ಪತ್ರೆಯ ಸ್ತಿçÃರೋಗ ತಜ್ಞರಾದ ಡಾ.ಸರೋಜ ಪಾಟೀಲ ಮಾತನಾಡಿ, ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಯ ಅಂದರೆ ಸಾರ್ವಜನಿಕ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಎಸ್.ಎನ್.ಸಿ.ಯು, ಎಸ್.ಬಿ.ಎಸ್.ಯು, ಎನ್.ಆರ್.ಸಿ, ಪಿ.ಎನ್.ಸಿ.ಯು, ಮಕ್ಕಳವಾರ್ಡ್ ಕಾರ್ಯತಂತ್ರದ ಸ್ಥಳಗಳಲ್ಲಿ ವಿಶೇಷವಾಗಿ ಸ್ತನ್ಯಪಾನಕ್ಕಾಗಿ ಒಂದು ಕೊಠಡಿ ಮೀಸಲಿದೆ ಎಂದರು.


ಬೀದರ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರ ನೂರು ಹಾಸಿಗೆ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ವರ್ಷಾ ತೊಂಡಾರೆ ಅವರು ಮಾತನಾಡಿ, ಮಗು ಜನಿಸಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಮಾಡಿಸುವುದು ಕೊಲೊಸ್ಟೊçÃಮ್ ಸೇವನೆಯ ಪ್ರಾಮುಖ್ಯತೆ ಹಾಗೂ ಮೊದಲ ಆರು ತಿಂಗಳ ವರೆಗೆ ಕಡ್ಡಾಯ ಸ್ತನ್ಯಪಾನ ಮಾಡುವುದರಿಂದ ಆರಂಭಿಕ ಬಾಲ್ಯದ ಬೆಳವಣಿಗೆ ಹೆಚ್ಚಿಸಲು ಮತ್ತು ಪೌಷ್ಟಿಕಾಂಶವನ್ನು ಸುಧಾರಿಸಲು ಹಾಗೂ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸ್ತನ್ಯಪಾನ ಮಾಡಿಸುವುದು ಬಹಳ ಮುಖ್ಯವಾಗಿರುತ್ತದೆ.

ಎಲ್ಲರೂ ಎಚ್ಚೆತ್ತುಕೊಂಡು ಎದೆಹಾಲಿನ ಮಹತ್ವದ ಬಗ್ಗೆ ಅರಿತುಕೊಂಡು ಎಲ್ಲಾ ತಾಯಂದಿರು ಹಾಗೂ ಗರ್ಭಿಣಿಯರು ಕನಿಷ್ಟ ಎರಡು ವರ್ಷದವರೆಗೆ ಸ್ತನ್ಯಪಾನ ಮಾಡಿಸುವಂತೆ ತಿಳಿಸಿದರು.


ಜಿಲ್ಲಾ ಕಾರ್ಯಕ್ರಮ ಸಂಯೋಜಕ ಶಿವಶಂಕರ ಬೇಮಳಗಿ ಮಾತನಾಡಿ, ಸಪ್ತಾಹದ ಬಗ್ಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಆರೋಗ್ಯ ಸಂಸ್ಥೆಗಳ ಉಪಕೇಂದ್ರಗಳ ಗುಂಪು ಸಭೆಗಳಲ್ಲಿ, ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಪೌಷ್ಠಿಕ ಸಮಿತಿ ಸಭೆಯಲ್ಲಿ ಸಭೆಗಳಲ್ಲಿ ಸ್ತನ್ಯಪಾನದ ಮಹತ್ವದ ಬಗ್ಗೆ ತಾಯಂದಿರು ಹಾಗೂ ಗರ್ಭಿಣಿಯರು ಮಾಹಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ವಿನಂತಿಸಿದರು ಹಾಗೂ ಎಲ್ಲಾ ಗರ್ಭಿಣಿ ಮತ್ತು ಬಾಣಂತಿಯರಿಗೆ ಎದೆಹಾಲಿನ ಮಹತ್ವ ಕುರಿತು ಅರಿವು ಮೂಡಿಸಲಾಗುವುದು ಎಂಧು ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಡಾ. ಗೌಸ್ ಪಾಶಾ ಮಕ್ಕಳ ತಜ್ಞರು, ಡಾ. ಪ್ರೀತಿ ಬಿರಾದರ ಸ್ತಿçoರೋಗ ತಜ್ಞರು,. ಭಾಗ್ಯಲಕ್ಷಿö್ಮ ಪ್ರ.ಡಿ.ಎನ್.ಓ., ಸಂಗೀತಾ ಡಿ.ಸಿ.ಎಂ, ರವಿ. ಡಿ.ಡಿ.ಎಂ, ಅನಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD