ರಾಯಚೂರು.30.ಜುಲೈ 25: ಜೀವನ ಶೈಲಿಯ ಮತ್ತು ವರ್ತನೆಯ ಬದಲಾವಣೆಯಿಂದ ಅರಿವು ಮೂಡಿಸುವುದರ ಮೂಲಕ ಯಕೃತ್‌ನ ಆರೈಕೆಯನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸುರೇಂದ್ರ ಬಾಬು ಅವರು ಹೇಳಿದರು.
ಜುಲೈ 28ರ ಸೋಮವಾರ ದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ವಿಭಾಗ, ರಾಷ್ಟಿçÃಯ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮದಡಿ ಜರುಗಿದ ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಸಿಬ್ಬಂದಿಯವರಿಗೆ ಹೆಪಟೈಟಿಸ್ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೆಪಟೈಟಿಸ್ ಸೋಂಕಿಗೆ ಅಸ್ಪತ್ರೆಯ ಸಿಬ್ಬಂದಿಯವರು ಒಳಗಾಗುವ ಸಾಧ್ಯತೆಗಳು ಇದ್ದು, ಈ ದಿಶೆಯಲ್ಲಿ ಲಸಿಕೆ ತಪ್ಪದೆ ಪಡೆಯಬೇಕಿದೆ. ಅಲ್ಲದೆ ಸುರಕ್ಷಿತ ರಕ್ತ, ಮತ್ತು ಅದರ ಉತ್ಪನ್ನಗಳ ಬಳಕೆ, ಸುರಕ್ಷಿತ ಚುಚ್ಚುಮದ್ದು ನೀಡುವಿಕೆ, ಸುರಕ್ಷಿತ ನೀರು, ಸ್ವಚ್ಚ ಶೌಚಾಲಯ ಬಳಸುವಿಕೆ, ಸುತ್ತಲಿನ ನೈರ್ಮಲ್ಯ ಕಾಪಾಡಲು ಅಧ್ಯತೆ ನೀಡಲು ಜಾಗೃತಿ ನೀಡಬೇಕು. ಅಲ್ಲದೆ ಮಕ್ಕಳು ಹುಟ್ಟಿನಿಂದ ಒಂದು ವರ್ಷದೊಳಗೆ ತಪ್ಪದೆ ಲಸಿಕೆ ಹಾಕಿಸಬೇಕೆಂದರು.
ಈ ವೇಳೆ ಕಾರ್ಯಕ್ರಮ ಕುರಿತು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ.ಮಹಮ್ಮದ್ ಶಾಕೀರ್ ಅವರು ಮಾತನಾಡಿ, ಕೆಲಸದ ಸ್ಥಳದಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಸಿಬ್ಬಂದಿಯವರಿಗೆ ಸೋಂಕು ತಡೆಗೆ ಮೊದಲ ಹಂತದಲ್ಲಿ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ. ಪ್ರಾಥಮಿಕ ಆರೋಗ್ಯ ಕಂದ್ರಗಳಲ್ಲಿಯ ತಜ್ಞವೈದ್ಯರು, ವೈದ್ಯರು, ಶೂಶ್ರುಷಣಾಧಿಕಾರಿ, ಪ್ರಯೋಗಾಲಯ ತಂತ್ರಜ್ಞರು, ಗ್ರುಪ್ ಡಿ ಸಿಬ್ಬಂದಿಯವರಿಗೆ ಎರಡನೆಯ ಹಂತದಲ್ಲಿ ಸಿಹೆಚ್‌ಓ, ಆಶಾ ಕಾರ್ಯಕರ್ತೆಯರಿಗೆ ಲಸಿಕೆಯನ್ನು ಮೊದಲ ದಿನ, ಒಂದು ತಿಂಗಳು, ಆರು ತಿಂಗಳು ಅವಧಿಯಲ್ಲಿ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್ ಎನ್. ಡಬ್ಲ್ಯು.ಹೆಚ್.ಓ ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ.ಅನಿಲ ಕುಮಾರ ತಾಳಿಕೋಟ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ್, ಜಿಲ್ಲಾ ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ತಾಲೂಕಾ ಅರೋಗ್ಯ ಮೇಲ್ವಿಚಾರಣಾ ಅಧಿಕಾರಿಗಳು, ಸಿಬ್ಬಂದಿಯವರು ಇದ್ದರು.
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…