|

ವೃತ್ತಿಪರ ತರಬೇತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕೊಪ್ಪಳ.22.ಜುಲೈ25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ವೃತ್ತಿಪರ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಸೇವಾಸಿಂಧು ವೆಬ್ ಪೋರ್ಟಲ್  https://sevasindhu.karnataka.gov.in    ನಲ್ಲಿ ಆಗಸ್ಟ್ 02 ರೊಳಗೆ ಅರ್ಜಿ ಸಲ್ಲಿಸಬೇಕು.

  MULTI CUISINE COOK, F & B SERVICE  ಮತ್ತು  ENTERPRNEURSHIP PROGRAMER (EP)   ಕೋರ್ಸುಗಳಿಗೆ  5 ತಿಂಗಳ ಅವಧಿಯ ತರಬೇತಿಯನ್ನು ನೀಡಲಾಗುತ್ತದೆ. 10ನೇ ತರಗತಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 8 ಲಕ್ಷಕ್ಕಿಂತ ಮೀರಿರಬಾರದು.

ಅರ್ಜಿ ಸಲ್ಲಿಕೆ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ :  https://dom.karnataka.gov.in     ಹಾಗೂ ಸಹಾಯವಾಣಿ: 8277799990, ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 8088894549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಗಂಗಾವತಿ: 9986244408, ಕುಷ್ಟಗಿ: 8880482486, ಯಲಬುರ್ಗಾ: 8095191406 ವಿಳಾಸ ಮತ್ತು ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     

Similar Posts

  • |

    ರಾಜ್ಯದಲ್ಲಿ 5 ಹೊಸ ರೈಲು ಮಾರ್ಗಗಳ ಕಾಮಗಾರಿಗೆ ವೇಗ

    ಬೆಂಗಳೂರು.30.ಡಿಸೆಂಬರ್.25: ರಾಜ್ಯದಲ್ಲಿ 5 ಹೊಸ ರೈಲು ಮಾರ್ಗ ಕಾಮಗಾರಿ ವೇಗವಾಗಿ ನಡೆಯುತ್ತಿದೆ ಅದರಲಿ ಪ್ರಥಮವಾಗಿ ತುಮಕೂರು ದಾವಣಗೆರೆ ರೈಲು ಮಾರ್ಗ ಸೇರಿ ಕರ್ನಾಟಕದ 5 ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ಪ್ರಾಥಮಿಕ ಆದಿತ್ಯ ಕೊಡಲಾಗಿದೆ. ನಿಗದಿತ ದಿನಾಂಕದೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಇತ್ತೀಚೆಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ” ರಾಜ್ಯದಲ್ಲಿಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಬೇಕಾಗಿರುವ ಭೂಮಿಯನ್ನು ಆದ್ಯತೆ ಮೇರೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು…

  • ಅತಿಥಿ ಉಪನ್ಯಾಸಕರ ಸೇವೆ ಸಂಬಂಧಿತ ಮನವಿ

    ಕೊಪ್ಪಳ.07.ನವೆಂಬರ.25: ಸತತ ಎರಡು ದಶಕದಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸಲು ಆಗ್ರಹಿಸಿ ಗುರುವಾರ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಮಂಜುಶ್ರೀ ಅವರಿಗೆ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದಿಂದ ಮನವಿ ಸಲ್ಲಿಸಲಾಯಿತು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಆಯುಕ್ತರಿಗೆ ಮನವಿ ಸಲ್ಲಿಸಿ ಮಾತನಾಡಿದ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಅವರು, ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅನೇಕರ ವಯೋಮಿತಿ…

  • |

    ಕರ್ನಾಟಕದ ಹವಾಮಾನ ಮುನ್ಸೂಚನೆ. 03.05.2025ರ ಬೆಳಿಗ್ಗೆ 8 ಗಂಟೆವರೆಗಿನ

    ಬೆಂಗಳೂರು.02.ಮೇ.25:- ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ನಾಳೆ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ…

  • |

    ಪಿಹೆಚ್. ಡಿ. ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    2024-25ನೇ ಶೈಕ್ಷಣಿಕ ಸಾಲಿಗೆ, ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ಸಂಶೋಧನಾ ಕೇಂದ್ರಗಳಲ್ಲಿನ ಗಳಲ್ಲಿನ ಪಿಹೆಚ್.ಡಿ. ಸಂಶೋಧನೆಗಾಗಿ (ಪೂರ್ಣಕಾಲಿಕ ಮತ್ತು ಅಂಶಕಾಲಿಕೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯದ ಪಿಹೆಚ್.ಡಿ. ನಿಯಮಾವಳಿ (ಪರಿಷ್ಕೃತ) 2017ರ ಪ್ರಕಾರ ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮೆರಿಟ್. ರೋಸ್ಟರ್ ಹಾಗೂ ರಿಕ್ತಸ್ಥಾನಗಳ ಲಭ್ಯತೆ ಆಧರಿಸಿ ತಾತ್ಕಾಲಿಕ ನೋಂದಣಿ ನೀಡಲಾಗುವುದು. ಅರ್ಜಿ ನಮೂನೆಯನ್ನು ದಿನಾಂಕ:07-07-2025 ರಿಂದ ವಿಶ್ವವಿದ್ಯಾಲಯದ ವೆಬ್ ಸೈಟ್ …

  • |

    ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನ.

    ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪರಿಚಯಿಸಲಾದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನವು ತಳಮಟ್ಟದಲ್ಲಿ ಪೊಲೀಸರ ದಕ್ಷತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಪರಿಶೀಲಿಸಲು ನವದೆಹಲಿಯಲ್ಲಿ ಇಂದು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಮತ್ತು ಮುಖ್ಯಮಂತ್ರಿ ರೇಖಾ ಗುಪ್ತಾ ಅವರೊಂದಿಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶ್ರೀ ಅಮಿತ್ ಶಾ ಮಾತನಾಡಿದರು….

  • |

    ವಸತಿ ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ನೇರ ಪ್ರವೇಶ

    ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾoಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9 ಮತ್ತು 10 ನೇ ತರಗತಿಯಲ್ಲಿ ಸ್ಥಾನಗಳಿಗೆ ನೇರ ಪ್ರವೇಶ ನೀಡಲಾಗುತ್ತಿದೆ. ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ. ಚಳ್ಳಕೆರೆ…

Leave a Reply

Your email address will not be published. Required fields are marked *