ಬೆಂಗಳೂರು.27.ಮೇ.25:-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್- ಎ, ಬಿ, ಸಿ ಮತ್ತು ಡಿ ವೃಂದದ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆ, 2011 ಹಾಗೂ ಅದರಡಿ ರಚಿಸಲಾದ ನಿಯಮಾವಳಿ, 2011 ಹಾಗೂ ಕಾಲಕಾಲಕ್ಕೆ ಮಾಡಲಾದ ತಿದ್ದುಪಡಿ ನಿಯಮಾವಳಿಯಂತೆ ಗ್ರೂಪ್-ಎ ವೃಂದದ ಹಿರಿಯ ತಜ್ಞರು, ತಜ್ಞರು, ಉಪ ಮುಖ್ಯ ವೈದ್ಯಾಧಿಕಾರಿ/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ಮುಖ್ಯ ದಂತ ಆರೋಗ್ಯಾಧಿಕಾರಿ/ಹಿರಿಯ ದಂತ ಆರೋಗ್ಯಾಧಿಕಾರಿ/ದಂತ ಆರೋಗ್ಯಾಧಿಕಾರಿ ಮತ್ತು ಗ್ರೂಪ್-ಬಿ, ಸಿ ಮತ್ತು ಡಿ ವೃಂದದ ಸಿಬ್ಬಂದಿಗಳ ವರ್ಗಾವಣೆಯನ್ನು ಸಮಾಲೋಚನೆಯ ಮೂಲಕ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸಿಬ್ಬಂದಿಗಳ ವರ್ಗಾವಣೆಯನ್ನು ಸಮಾಲೋಚನೆ ಮೂಲಕ ಕೈಗೊಂಡು, ಪ್ರಕ್ರಿಯೆಯನ್ನು ದಿನಾಂಕ: 15/06/2025ರೊಳಗಾಗಿ ಪೂರ್ಣಗೊಳಿಸಲು ಸಕ್ಷಮ ಪ್ರಾಧಿಕಾರಗಳಿಗೆ ಅನುಮತಿ ನೀಡುವಂತ ಕೋರಿರುತ್ತಾರೆ. ಮೇಲ್ಕಂಡ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಈ ಕೆಳಕಂಡಂತ ಅದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇಲಾಖೆಗೆ ಸಂಬಂಧಿಸಿದಂತೆ ‘ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ನಿಯಮಗಳು, 2011’ರ ನಿಯಮ-3ರ ಕೋಷ್ಠಕ (1) ಮತ್ತು (ii)ಗಳಲ್ಲಿನ ಹುದ್ದೆಗಳ ಎದುರು ನಮೂದಿಸಿರುವ ಸಕ್ಷಮ ಪ್ರಾಧಿಕಾರಗಳು, ಇಲಾಖೆಯ ವರ್ಗಾವಣಾ ಕಾಯ್ದೆ ಹಾಗೂ ನಿಯಮಾವಳಿ ಹಾಗೂ ಕಾಲಕಾಲದ ತಿದ್ದುಪಡಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಡಿಸಿ, ಈ ಕೆಳಗಿನ ವೇಳಾ ಪಟ್ಟಿಯಂತೆ ವರ್ಗಾವಣೆಯನ್ನು ನಿಯಮಾವಳಿಯ ನಿಯಮ-7ರಂತೆ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಕೈಗೊಳ್ಳಲು ಆದೇಶಿಸಿದೆ.
ವಿಜಯಪುರ.09.ಆಗಸ್ಟ್.25:- ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ'ದ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ಈ ಬಾರಿ ಮೂರು ಹೊಸ…
ಧಾರವಾಡ.09.ಆಗಸ್ಟ್.25:- ಕರ್ನಾಟಕ ವಿಶ್ವವಿದ್ಯಾಲಯವು ಅಧಿಕೃತ ಅಧಿಸೂಚನೆ ಮೂಲಕ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ…
ಮಂಗಳೂರು.09.ಆಗಸ್ಟ್.25:- 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿ-ಸಂದರ್ಶನ ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗಿದ್ದು, ಆಯ್ಕೆಗೆ ಸಂಬಂಧಿಸಿ ಸಂದರ್ಶನವು ಮಂಗಳೂರು ವಿಶ್ವವಿದ್ಯಾನಿಲಯದ…
ಕೊಪ್ಪಳ.08.ಆಗಸ್ಟ್.25: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ…
ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ…
ಕೊಪ್ಪಳ.08.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ…