ಶಾಲಾ-ಕಾಲೇಜುಗಳಿಗೆ ರಜೆ, 7 ದಿನಗಳ ಕಾಲ ಶೋಕಾಚರಣೆ ಘೋಷಣೆ!

ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ನಿಧನದ ಹಿನ್ನಲೆ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ.ಜೊತೆಗೆ ನಾಳೆ (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದೆ.

ಅಲ್ಲದೇ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ. ಇದರ ನಡುವೆ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ರದ್ದು ಮಾಡಲಾಗಿದೆ.

7 ದಿನಗಳ ರಾಷ್ಟ್ರೀಯ ಶೋಕಾಚರಣೆ:

ನಾಳೆ ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ಡಾ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ಸೇರಿ ಶ್ರದ್ಧಾಂಜಲಿ ಸಲ್ಲಿಸಲಿದೆ.

ಭಾರತ ಸರ್ಕಾರದ ಮೂಲಗಳ ಪ್ರಕಾರ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ವರದಿಯಾಗಿದೆ.

ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಶಾಲೆ. ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

6 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago