ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಸಿ,ಡಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್ : ರಾಜ್ಯ ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು.02.ಜೂನ್.25:- ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ ಸಂಭಂದಿಷಿತ್-ಕೌನ್ಸಿಲಿಂಗ್ ಮೂಲಕ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇನೌವ 2025 ದಿನಾಂಕ:12.05.2025ರ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು ಹಾಗೂ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿರ್ವಹಿಸುವ ಸಲುವಾಗಿ ಹಾಗೂ ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಇಲಾಖಾ ಮುಖ್ಯಸ್ಥರ ಹಂತದಲ್ಲಿ ಉಲ್ಲೇಖಿತ ಆದೇಶದಲ್ಲಿನ ವರ್ಗಾವಣೆ ಮಾರ್ಗಸೂಚಿಗಳನ್ವಯ ಇಲಾಖೆಯಲ್ಲಿ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಸರ್ಕಾರವು ತೀರ್ಮಾನಿಸಿದೆ. ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಮಾಡಲು ಇಲಾಖಾ ಮುಖ್ಯಸ್ಥರು ಸಕ್ಷಮ ಪ್ರಾಧಿಕಾರವಾಗಿರುತ್ತಾರೆ.

ವರ್ಗಾವಣೆಯನ್ನು ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ನಿರ್ವಹಿಸಲು ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತಾಲಯ, ಬೆಂಗಳೂರು ಇವರು ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಸದರಿ ತಂತ್ರಾಂಶವನ್ನು ಬಳಸಿ ಅಪರ ಆಯುಕ್ತರು, ಕಲಬುರಗಿ ಹಾಗೂ ಅಪರ ಆಯುಕ್ತರು, ಧಾರವಾಡ ಇವರು ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು.

ಮುಂದುವರೆದು, ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಸಾರ್ವಜನಿಕ ಗ್ರಂಥಾಲಯ ಇಲಾಖೆ ಮತ್ತು ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯ ಇಲಾಖಾ ಮುಖ್ಯಸ್ಥರುಗಳು ಸಹ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆನ್‌ಲೈನ್ ಮುಖಾಂತರ ಪಾರದರ್ಶಕವಾಗಿ ಕೈಗೊಳ್ಳತಕ್ಕದ್ದು.

prajaprabhat

Recent Posts

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

1 hour ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

1 hour ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

2 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

2 hours ago

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ

ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…

2 hours ago

ಒಳಮೀಸಲಾತಿ ತೀರ್ಮಾನ ನಂತರ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ  ಮಾಡಲಾಗುವುದು.

ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…

3 hours ago