04/07/2025 10:21 PM

Translate Language

Home » ಲೈವ್ ನ್ಯೂಸ್ » ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ

ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ

Facebook
X
WhatsApp
Telegram

ಬೆಂಗಳೂರು.04.ಜುಲೈ.25:- ರಾಜ್ಯದ ಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಕುರಿತು ಚುನಾವಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಉಲ್ಲೇಖಿತ ಅರೇ ಸರ್ಕಾರಿ ಪತ್ರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಶಾಲೆಗಳ ವಿವಿಧ ಶಿಕ್ಷಕರನ್ನು ಚುನಾವಣಾ ಸಂಬಂಧಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವುದನ್ನು ಹಿಂಪಡೆಯಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನವನ್ನು ನೀಡುವಂತೆ ಕೋರಿರುತ್ತಾರೆ.

ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ ಹಾಗೂ ಮಾನ್ಯ ಭಾರತ ಚುನಾವಣಾ ಆಯೋಗ ಹೊರಡಿಸಿರುವ ನಿರ್ದೇಶನಗಳು ಹಾಗೂ ಮಾರ್ಗಸೂಚಿಗಳನ್ನು ಇದರೊಂದಿಗೆ ಲಗತ್ತಿಸಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲವು ಬೋಧಕ ಸಿಬ್ಬಂದಿಗಳನ್ನು ರಜೆ ದಿನಗಳಲ್ಲಿ ಹಾಗೂ ಬೋಧಕೇತರ ದಿನಗಳಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಬಹುದೆಂದೂ ಹಾಗೂ ಬೋಧಕೇತರ ಸಿಬ್ಬಂದಿಗಳನ್ನು ಕಾನೂನಿನಲ್ಲಿ ಅವಕಾಶವಿದ್ದಲ್ಲಿ ಯಾವುದೇ ದಿನ ಅಥವಾ ಯಾವುದೇ ಸಮಯದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಬಹುದಾಗಿದೆ ಎಂದು ಆದೇಶ ಹೊರಡಿಸಿರುತ್ತದೆ. ಮುಂದುವರೆದು, ಮಾನ್ಯ ಭಾರತ ಚುನಾವಣಾ ಆಯೋಗದ ದಿನಾಂಕ 05.06.2025ರ ಸುತ್ತೋಲೆಯಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ, 1950 ರ ಕಲಂ 13ಬಿ (2) ರಡಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡುವಾಗ ಸಂಬಂಧಪಟ್ಟ ಭಾಗದ BLO ನೇಮಕಾತಿಗಾಗಿ ಗ್ರೂಪ್ ಸಿ ದರ್ಜೆಯ ಸರ್ಕಾರಿ/ಸ್ಥಳಿಯ ಸಂಸ್ಥೆಗಳ ಖಾಯಂ ನೌಕರರಿಗೆ ಮೊದಲನೇ ಪ್ರಾಶಾಸ್ತ್ರವನ್ನು ನೀಡುವುದು ಹಾಗೂ ಒಂದು ವೇಳೆ ಅಂತಹ ನೌಕರರು ಲಭ್ಯವಿಲ್ಲದಿದ್ದರೆ, ಅಂಗನವಾಡಿ, ಗುತ್ತಿಗೆ ಶಿಕ್ಷಕರು ಅಥವಾ ಕೇಂದ್ರ ಸರ್ಕಾರದ ನೌಕರರನ್ನು BLO ಆಗಿ ನೇಮಿಸಲು ನಿರ್ದೇಶನ ನೀಡಲಾಗಿರುತ್ತದೆ. ಸದರಿ ಸುತ್ತೋಲೆಯಲ್ಲಿ ಶಿಕ್ಷಕರಿಗೆ ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ.

ಮೇಲಿನ ಅಂಶಗಳ ಹಿನ್ನಲೆಯಲ್ಲಿ, ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಸಂದರ್ಭದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ ಹಾಗೂ ಮಾನ್ಯ ಭಾರತ ಚುನಾವಣಾ ಆಯೋಗ ಹೊರಡಿಸಿರುವ ನಿರ್ದೇಶನಗಳು ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಯಾವುದೇ ಲೋಪವಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದೆ. ಮುಂದುವರೆದು, ಪ್ರಸ್ತುತ ರಾಷ್ಟ್ರ ಮಟ್ಟದಲ್ಲಿ ಹಾಗೂ ವಿಧಾನ ಸಭಾ ಕ್ಷೇತ್ರಗಳ ಹಂತದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಗಳು ಜರುಗುತ್ತಿದ್ದು, ಶಿಕ್ಷಕರನ್ನು ಒಳಗೊಂಡಂತೆ ಬೂತ್ ಮಟ್ಟದ ಅಧಿಕಾರಿಗಳಾಗಿ ನೇಮಕಗೊಂಡಿರುವ ಎಲ್ಲಾ ನೌಕರರು ಕಡ್ಡಾಯವಾಗಿ ಹಾಜರಾಗಲು ಸೂಕ್ತ ಕ್ರಮ ಕೈಗೊಳ್ಳುಂತೆ ಕೋರಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!