ಪ್ರೌಢಶಾಲೆಯಲ್ಲಿ 11,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.28.ಮೇ.25:- 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖ (1) ರನ್ವಯ 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ.

ಅದರಂತೆ 2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 9499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಉಲ್ಲೇಖ (3) ಮತ್ತು (4) ರಲ್ಲಿರುವಂತೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿದೆ. ಸದರಿ ಅತಿಥಿ ಶಿಕ್ಷಕರನ್ನು ದಿನಾಂಕ:01.06.2025 ರಿಂದ ನೇಮಕಾತಿ ಮಾಡಿಕೊಳ್ಳಲು ತಿಳಿಸಿದೆ.
ಷರತ್ತುಗಳು:-

ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.
ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.
ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ. ನಂತರ ಇತರ ವಿಷಯಗಳಿಗೆ ಆದ್ಯತೆ ನೀಡುವುದು.
ಸದರಿ ವಿಷಯಗಳಿಗೆ ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.
ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಅದೇ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.
ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.
ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸುವುದು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗೆ ಸ್ವೀಕೃತವಾದ ಅರ್ಜಿಗಳಲ್ಲಿ ಹೆಚ್ಚು ಮೆರಿಟ್ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡತಕ್ಕದ್ದು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

5 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

6 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

6 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

8 hours ago