04 ಡಿಸೆಂಬರ್ 24.ಅಮೃತಸರದ:- ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಸ್ಥಳದಲ್ಲಿದ್ದ ಜನರು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಆತನನ್ನು ಬಂಧಿಸಿದ್ದಾರೆ. ಧಾರ್ಮಿಕ ಶಿಕ್ಷೆಯ ಭಾಗವಾಗಿ ಸೇವೆ ಸಲ್ಲಿಸುತ್ತಿದ್ದಾಗ ಬಾದಲ್ ಮೇಲೆ ದಾಳಿ ನಡೆಸಲಾಯಿತು. ಮಾಹಿತಿ ಪ್ರಕಾರ ದಾಳಿಯಿಂದ ಬಾದಲ್ ಸ್ವಲ್ಪದರಲ್ಲೇ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ. ಏತನ್ಮಧ್ಯೆ, ಭದ್ರತೆ ಒದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.
ಸಿಖ್ ಧರ್ಮಗ್ರಂಥಕ್ಕೆ ಅವಮಾನ ಎಸಗಿದ್ದ ವಿವಾದಿತ ಸಂತ ರಾಮ್ ರಹೀಂಗೆ ಕ್ಷಮೆ ನೀಡಿದ್ದ ಕಾರಣಕ್ಕೆ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಸುಖಬೀರ್ ಸಿಂಗ್ ಬಾದಲ್ ಅವರಿಗೆ ಸಿಖ್ ಧಾರ್ಮಿಕ ನ್ಯಾಯ ಮಂಡಳಿ ಅಕಾಲ್ ತಖ್ತ್ ಶಿಕ್ಷೆ ವಿಧಿಸಿತ್ತು. ಸಿಖ್ ಧಾರ್ಮಿಕ ಕ್ಷೇತ್ರವಾದ ಸ್ವರ್ಣಮಂದಿರದಲ್ಲಿ ಟಾಯ್ಲೆಟ್ ಸ್ವಚ್ಛಗೊಳಿಸಬೇಕು ಭೋಜನ ಶಾಲೆಯಾದ ಲಂಗರ್‌ನಲ್ಲಿ ಕೆಲಸ ಮಾಡಬೇಕು, ಕಾವಲುಗಾರನಾಗಿ ಸೇವೆ ಸಲ್ಲಿಸಬೇಕು ಎಂದು ಶಿಕ್ಷೆ ನೀಡಲಾಗಿತ್ತು. ಅದರಂತೆ ನಿನ್ನೆಯಿಂದ ಸುಖ್ಬೀರ್ ಸಿಂಗ್ ಬದಲು ಅವರು ಸ್ವರ್ಣಮಂದಿರದಲ್ಲಿ ಕಾವಲುಗಾರನಾಗಿ ಸೇವೆ ಸಲ್ಲಿಸಿ ಶಿಕ್ಷೆ ಅನುಭವಿಸಿದರು.
ಮಧ್ಯಾಹ್ನ 12 ಗಂಟೆಯಿಂದ 1 ತಾಸು ಸ್ವರ್ಣ ಮಂದಿರದ ಮುಖ್ಯದ್ವಾರದಲ್ಲಿ ಸೇವಕರ ಉಡುಪು ಧರಿಸಿ, ಕೈಯಲ್ಲಿ ಈಟಿ ಹಿಡಿದು, ಕತ್ತಿನಲ್ಲಿ ತಾವು ಮಾಡಿದ ತಪ್ಪು ಮುದ್ರಿತವಾಗಿದ್ದ ಫಲಕ ಹಾಕಿಕೊಂಡು ಗಾಲಿಕುರ್ಚಿಯಲ್ಲಿ ಕುಳಿತು ಶಿಕ್ಷೆ ಅನುಭವಿಸಿದರು. ಬಳಿಕ ಲಂಗರ್‌ನಲ್ಲಿ (ಭೋಜನ ಶಾಲೆ) ಊಟ ಮಾಡಿದ ತಟ್ಟೆಗಳನ್ನು ಸ್ವೀಕರಿಸಿ ಶುಚಿಗೊಳಿಸಲು ಸಹಕರಿಸಿದರು. ಕಾಲಿಗೆ ಪೆಟ್ಟಾಗಿದ್ದ ಕಾರಣ ಶೂ ಪಾಲಿಷ್ ಮಾಡಲಿಲ್ಲ ಹಾಗೂ ಟಾಯ್ಲೆಟ್ ತೊಳೆಯಲಿಲ್ಲ. ಇದೇ ವೇಳೆ, ಇವರ ಜತೆ ಶಿಕ್ಷೆಗೆ ಒಳಗಾಗಿದ ಆಕಾಲಿ ದಳದ ಮಾಜಿ ಸಚಿವರು ಸಹ ಕತ್ತಿಗೆಗೆ ಫಲಕ ಧರಿಸಿಕೊಂಡು, ಶೌಚಾಲಯ ಶುಚಿಗೊಳಿಸಿ, ಭಕ್ತರಿಗೆ ಊಟ ತಿಂಡಿಗಳನ್ನು ಬಡಿಸಿ ಪಾತ್ರೆ ತೊಳೆದು, ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದರು. ಜೊತೆಗೆ 1 ತಾಸು ಕೀರ್ತನೆಗಳನ್ನು ಆಲಿಸಿ, ಸಿಖ್ಖರ ಪ್ರಾರ್ಥನೆಗಳನ್ನು ಪಾಲಿಸುವ ಮೂಲಕ ತಮ್ಮ ಶಿಕ್ಷಾ ಅವಧಿಯನ್ನು ಪೂರ್ಣಗೊಳಿಸಿದರು. ಈ ನಡುವೆ ಅಕಾಲಿ ತಖ್ತ್ ನಿರ್ದೇಶನದಂತೆ ಆಕಾಲಿ ದಳಕ್ಕೆ ಹೊಸ ಅಧ್ಯಕ್ಷರ ಶೋಧ ಆರಂಭವಾಗಿದೆ.
Source
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…