ಶೀಘ್ರದಲ್ಲೇ 2000 ಸಹಾಯಕ ಪ್ರಾಧ್ಯಾಪಕ ಹುದ್ದೆ ಭರ್ತಿ: ಸಚಿವ ಎಂಸಿ ಸುಧಾಕರ್.!

ಬೆಂಗಳೂರು.13.ಮಾರ್ಚ.25:- ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶೀಘ್ರದಲ್ಲೇ  ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಗುರುವಾರ ವಿಧಾನಸಭೆಗೆ ಮಹಿತಿ ನೀಡಿದ್ದಾರೆ.

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ ಎರಡು ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಬಜೆಟ್ನಲ್ಲಿ ಅವಕಾಶ ನೀಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹುದ್ದೆಗಳ ಕೊರತೆ ಇದೆ. ಈ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಲಾಗುವುದು. ಈ ಬಜೆಟ್ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಒಟ್ಟು 2 ಸಾವಿರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದರು.


ರಾಜ್ಯದಲ್ಲಿ ಒಟ್ಟು 18 ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿದ್ದು. ಇದರಲ್ಲಿ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿದೆ ಎಂದರು.

ಅರಸೀಕೆರೆ ಮತ್ತು ದೇವದುರ್ಗ ಎಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಕೊಪ್ಪಳದಲ್ಲಿ ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಆರಂಭಿಸುವ ಪ್ರಸ್ತಾಪ ಇಲ್ಲ.

ಪ್ರಸ್ತುತ ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ತಳಕಲ್ ಗ್ರಾಮ ಹಾಗೂ ಗಂಗಾವತಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ.

ತಳಕಲ್ನಲ್ಲಿ ವಿಟಿಯುನೊಂದಿಗೆ ಒಪ್ಪಂದ ಮಾಡಿಕೊಂಡು ದೊಡ್ಡಮಟ್ಟದ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಹೊಸ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಸರ್ಕಾರಿ ಕಾಲೇಜುಗಳನ್ನು ಸ್ಥಾಪಿಸಲು 2024ರ ಜುಲೈನಲ್ಲಿ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಈ ಸಮಿತಿಯ ವರದಿ ಆಧರಿಸಿ ಹೊಸ ಎಂಜಿನಿಯರಿಂಗ್ ಕಾಲೇಜುಗಳ ಆರಂಭದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

4 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago