02/08/2025 12:09 PM

Translate Language

Home » ಲೈವ್ ನ್ಯೂಸ್ » ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.22.ಜುಲೈ.25:- ಎನ್.ಹೆಚ್.ಎಂ. ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ದಿನಾಂಕ: 21-07-2025 ರಿಂದ 24-07-2025 ರವರೆಗೆ ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯ ಬೀದರನಿಂದ ಅರ್ಜಿ ಪಡೆದು ಸಲ್ಲಿಸಬಹುದು ಅಥವಾ ಮಿಂಚಂಚೆ ಮೂಲಕ rchobidar@gmail.com ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕವನ್ನು ವೀಕ್ಷಿಸಬಹುದು ಅಥವಾ ಮೊಬೈಲ್ ಸಂಖ್ಯೆ: 9449843185, 9449843100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!