ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ:ಅದ್ಧೂರಿಯಾಗಿ ಆಚರಿಸಲು ನಿರ್ಧಾರ: ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ


ಬೀದರ.05.ಮಾರ್ಚ.25: – ಬೀದರ್ ಜಿಲ್ಲೆಮಾರ್ಚ್.16 ರಂದು ನಡೆಯುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಾರ್ಚ.16 ರಂದು ನಡೆಯುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಕುರಿತು ಕರೆದ ಪೂರ್ವ ಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ಮಹಾತ್ಮರು ಮತ್ತು ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಜಿಲ್ಲಾಡಳಿತದಿಂದ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುವುದು. ಅಂದು ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯತಗಳಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು ಹಾಗೂ ಎಲ್ಲಾ ಸರ್ಕಾರಿ ಕಛೇರಿಗಳ ಮೇಲೆ ಹಾಗೂ ಎಲ್ಲಾ ಸರ್ಕಲ್‍ಗಳಲ್ಲಿ ದೀಪಾಲಂಕಾರ ಮಾಡಬೇಕೆಂದು ಹೇಳಿದರು.


ಅಂದು ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ರಥ ಮೆರವಣಿಗೆಗೆ ಚಾಲನೆ ನೀಡಲಾಗುವುದು, ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಶಿವಾಜಿ ಸರ್ಕಲ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಕರಿಯಪ್ಪ ಸರ್ಕಲ್ ಮೂಲಕ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ 11:30 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.


ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ವೈಜಿನಾಥ ಕಂಠಾಣೆ ಅವರು ಮಾತನಾಡಿ, ಸಮಾಜದ ಒಳಿತಿಗಾಗಿ ಮತ್ತು ಸಮಾಜದ ಸುಧಾರಣೆಗಾಗಿ ದುಡಿದಿರುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಕೇವಲ ಒಂದು ಜಾತಿಗೆ ಸೀಮಿತವಾಗದೆ ಎಲ್ಲರೂ ಒಂದಾಗಿ ಜಯಂತಿಯನ್ನು ಆಚರಿಸೋಣ, ಮೆರವಣಿಗೆಯಲ್ಲಿ ಡಿಜೆ ಬಳಸಲಾಗುವುದಿಲ್ಲ ಅದರ ಬದಲಿಗೆ ಸಿದ್ಧಾಂತ ಶಿಖಾಮಣಿ ಪುಸ್ತಕವನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಯ್ಯ ಸ್ವಾಮಿ, ಶಿವಶರಣಪ್ಪ ವಾಲಿ, ಬಿ.ಜಿ. ಸೆಟ್ಕಾರ್, ಕುಶಾಲ್ ಪಾಟೀಲ್ ಖಾನಾಪುರ, ರಾಮಕೃಷ್ಣ ಸಾಳೆ, ಸಿದ್ದರಾಮಯ್ಯ ಸ್ವಾಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

24 minutes ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

36 minutes ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

2 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

10 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

10 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

11 hours ago