ಬೀದರ.04.ಫೆಬ್ರುವರಿ.25:- ಕಾಯಕ ಶ್ರೇಷ್ಠತೆಯನ್ನು ಹೊಂದಿರುವ ಸವಿತಾ ಮಹರ್ಷಿ ಸಮಾಜ ಪ್ರಾಚೀನ ಕಾಲದಿಂದಲೂ ತಮ್ಮ ಕಾಯಕ ನಿಷ್ಠೆಯನ್ನು ಹೊಂದಿದ್ದು, ನಾವೇಲ್ಲರು ಶ್ರೀ ಸವಿತಾ ಮಹರ್ಷಿ ತತ್ವಗಳನ್ನು ಪಾಲಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಸಹಯೋಗದಲ್ಲಿ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸವಿತಾ ಸಮಾಜದ ಸೇವೆ ಸಮಾಜಕ್ಕೆ ಬಹು ದೊಡ್ಡದಾಗಿದೆ. ಕಾಯಕ ನಿಷ್ಠರು ಮತ್ತು ಪ್ರಾಮಾಣಿಕರು ಆಗಿದ್ದಾರೆ.
ಈ ಸಮಾಜದ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾವು ಪರಿಹರಿಸುತ್ತೇವೆ. ಸವಿತಾ ಮಹರ್ಷಿ ಸಮುದಾಯ ಭವನ ನಿರ್ಮಾಣಕ್ಕೆ ಸಂಬAಧಿಸಿದAತೆ ಭೂಮಿಯನ್ನು ಪರಿಶೀಲಿಸಿ ಆದಷ್ಟು ಬೇಗ ಮಂಜೂರಾತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೀದರನ ಜ್ಞಾನ ಸುಧಾ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಗಿರಿಧರ ಬಿ. ಎಚ್ ಅವರು ತಮ್ಮ ಅತಿಥಿ ಉಪನ್ಯಾಸದಲ್ಲಿ ಮಾತನಾಡಿ, ಸವಿತಾ ಸಮಾಜವು ಪೌರಾಣಿಕವಾಗಿ, ಐತಿಹಾಸಿಕವಾಗಿ, ತನ್ನದೇ ಇತಿಹಾಸವನ್ನು ಹೊಂದಿದೆ. ನಾಲ್ಕು ವೇದಗಳಲ್ಲಿ ಒಂದಾದ ಸಾಮವೇದವನ್ನು ರಚಿಸಿದ್ದು ಸವಿತಾ ಮಹರ್ಷಿ.
ಸಾಮವೇದವು ಸಂಗೀತಕ್ಕೆ ಸಂಬAಧಿಸಿದೆ. 12ನೇ ಶತಮಾನದಲ್ಲಿ ಕಲ್ಯಾಣದ ವಚನ ಸಾಹಿತ್ಯದಲ್ಲಿ ಹಡಪದ ಅಪ್ಪಣ್ಣ, ಹಡಪದ ಲಿಂಗಮ್ಮ ಶಿವಶರಣರು ಇದ್ದರು. ಸವಿತಾ ಸಮಾಜದವರು ವೈದ್ಯ, ಕ್ಷೌರಿಕ, ಡೊಲು, ನಾದಸ್ವರ, ವಾದನ ವಿವಿಧ ಕಾಯಕದಲ್ಲಿ ತೊಡಗಿದ್ದಾರೆ.
ಸಮಾಜದವರು ಉತ್ತಮವಾದ ಶಿಕ್ಷಣವನ್ನು ಪಡೆಯಬೇಕು ಸರ್ಕಾರದಿಂದ ಇರುವ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಶ್ರೀ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಶ್ರೀ ಸವಿತಾ ಮಹರ್ಷಿ ಭಾವಚಿತ್ರದ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಂಜುನಾಥ ಸ್ವಾಮಿ ಮತ್ತು ತಂಡದಿAದ ಸವಿತಾ ಮಹರ್ಷಿ ಗಾಯನ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಸವಿತಾ ಸಮಾಜದ ಮುಖಂಡರಾದ ಜಗನ್ನಾಥರಾವ ಚೆಲುವ, ಶಾಮರಾವ್ ಮೊರ್ಗಿ, ದತ್ತಾತ್ರೇಯ ಚೌಧರಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…