ನೋಟಿಸ್‌ ಹಿಂದೆ ಮಹಾನ್‌ ನಾಯಕರ ಕೈವಾಡ: ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು.26.ಮಾರ್ಚ್.25:- ಇಂತಹ ನೋಟಿಸ್‌ಗೆ ನಾನು ಹೆದರುವುದಿಲ್ಲ. ದಾಖಲೆ ಸಮೇತ ನೋಟಿಸ್‌ಗೆ ಉತ್ತರ ಕೊಡುತ್ತೇನೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಕುರಿತು ಎರಡು ತಿಂಗಳ ಹಿಂದೆಯೇ ಮಹಾನ್ ನಾಯಕರು ಮಾತನಾಡಿಕೊಂಡಿದ್ದರು.

ವರಿಷ್ಠರು ನೀಡಿರುವ ನೋಟಿಸ್‌ಗೆ ನಾನು ಭಯ ಬೀಳುವುದಿಲ್ಲ. ದಾಖಲೆ ಸಹಿತ ಉತ್ತರ ಕೊಡುತ್ತೇನೆ. ನೋಟಿಸ್‌ನಿಂದ ಹೆಚ್ಚು ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನನಗೆ ನೋಟಿಸ್ ನೀಡಿದ್ದಾರೆ. ಆದರೆ, ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತನಾಡಿದವರಿಗೇಕೆ ನೋಟಿಸ್‌ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಹಾನ್‌ ನಾಯಕರ ಹೆಸರು ಶೀಘ್ರ ಬಹಿರಂಗ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಇದ್ದಾಗ ಟೀಕೆಗಳು ಕೇಳಿ ಬರುತ್ತಿರಲಿಲ್ಲ. ಆದರೆ, ಯಡಿಯೂರಪ್ಪ ಮತ್ತು ವಿಜಯೇಂದ್ರ ಬಂದ ಮೇಲೆ ಟೀಕೆಗಳು ವ್ಯಾಪಕವಾಗಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾಗಲು ಟೀಕೆ ಮಾಡಲಿಲ್ಲ. ಈಗ ಕೆಲ ಕೇಂದ್ರ ನಾಯಕರೇ ಯತ್ನಾಳ್ ಮೂಲಕ ಟೀಕೆ ಮಾಡಿಸುತ್ತಿದ್ದಾರೆ. ಇದನ್ನು ಸ್ವತಃ ಯತ್ನಾಳ್ ಅವರೇ ಒಪ್ಪಿಕೊಂಡಿದ್ದಾರೆ. ಪಕ್ಷದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಆ ಮಹಾನ್ ನಾಯಕರ ಹೆಸರನ್ನು ಶೀಘ್ರವೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಮಂಗಳವಾರ ತಡರಾತ್ರಿ ಷೋಕಾಸ್‌ ನೋಟಿಸ್ ಕೈಸೇರಿದೆ. ಕಾರ್ಯಕರ್ತರು, ಶಾಸಕರು, ಮಾಜಿ ಶಾಸಕರು ಹಾಗೂ ವೀರಶೈವ ಮುಖಂಡರು ನನಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಾನು ನೋಟಿಸ್‌ಗೆ ಭಯಪಟ್ಟಿಲ್ಲ, ರೇಣುಕಾಚಾರ್ಯ ಎಂದಿಗೂ ಭಯ ಬೀಳುವ ವ್ಯಕ್ತಿಯಲ್ಲ ಎಂದು ಹರಿಹಾಯ್ದಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ವಿಧಾನಸಭೆ ಹೊರಗೆ ಮತ್ತು ಒಳಗೆ ನಿರಂತರವಾಗಿ ಟೀಕೆ ಮಾಡುತ್ತಿದ್ದ ಮಹಾನ್ ನಾಯಕರಿಗೆ ಅಂದೇ ನೋಟಿಸ್ ಕೊಟ್ಟಿದ್ದರೆ ಈಗ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಇಂತಹವರಿಂದಲೇ ಬಿಜೆಪಿಯು 2013 ಮತ್ತು 2023 ರಲ್ಲಿ ಅಧಿಕಾರದಿಂದ ವಂಚಿತವಾಯಿತು. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದು ತಪ್ಪು ಎಂದು ಅಂದು ನೇರವಾಗಿ ಹೇಳಿದ್ದೆ. 2019 ರಿಂದ ಇಲ್ಲಿಯವರಿಗೆ ಯಡಿಯೂರಪ್ಪ ಅವರನ್ನು ಟೀಕೆ ಮಾಡಿದವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ, ನೋಟಿಸ್ ಕೊಟ್ಟರೂ ಯಾಕೆ ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪಕ್ಷದ ವಿದ್ಯಮಾನಗಳ ಕುರಿತು ಹೈಕಮಾಂಡ್‌ಗೆ ನಾನು ಪತ್ರ ಬರೆದಿದ್ದರೆ ಪರಿಸ್ಥಿತಿ ಬೇರೆಯೇ ಆಗುತಿತ್ತು. ರಾಷ್ಟ್ರೀಯ ನಾಯಕರಿಗೆ ಗೌರವ ನೀಡಿ ಪತ್ರ ಬರೆಯುವ ಉದ್ದೇಶದಿಂದ ಹಿಂದೆ ಸರಿದೆ. ಆದರೆ, ಈಗ ಷೋಕಾಸ್ ನೋಟಿಸ್ ಜಾರಿ ಮಾಡಿದ್ದು, ಮಾತನಾಡಲು ವೇದಿಕೆ ಕೊಟ್ಟಂತೆ ಆಗಿದೆ. ಐದಾರು ವರ್ಷಗಳಿಂದ ಪಕ್ಷದಲ್ಲಿನ ಗೊಂದಲಗಳು ಮತ್ತು ಪಕ್ಷ ವಿರೋಧಿ ಚಟುವಟಿಕೆ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ. ಜೊತೆಗೆ ಶಿಸ್ತು ಸಮಿತಿಗೆ ಸಮರ್ಪಕ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

5 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

5 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

6 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

7 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

8 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

9 hours ago