ಬೀದರ.11.ಜುಲೈ 26: ಸಂಕಷ್ಟದಲ್ಲಿರುವ ಮಕ್ಕಳ ಪೋಷಣೆಗೋಸ್ಕರ ಪೋಷಕತ್ವ (ಫಾಸ್ಟರ್ ಕೇರ್) ಯೋಜನೆಯಡಿ ಅರ್ಹ ಕುಟುಂಬವನ್ನು ಗುರುತಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಬಾಲ ನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ 2015 ಸೆಕ್ಷನ್ 44ರನ್ವಯ ಪೋಷಕತ್ವ ಯೋಜನೆಯಡಿಯಲ್ಲಿ ವಿವಿಧ ಸಂಕಷ್ಟದಲ್ಲಿರುವ ಮಕ್ಕಳಿಗೆ ತಾತ್ಕಾಲಿಕವಾಗಿ ಕುಟುಂಬದ ವಾತವರಣ ಕಲ್ಪಿಸಿ, ರಕ್ಷಣೆ ಮತ್ತು ಪೋಷಣೆ ಮಾಡಲು ಅರ್ಹ ಕಟುಂಬವನ್ನು ಗುರುತಿಸಬೇಕಾಗಿರುವುದರಿಂದ ಆಹ್ವಾನಿಸಿದೆ.
ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಕ್ಕಳನ್ನು ಒಂದು ವರ್ಷದ ಅವಧಿಗೆ ಮೀರದಂತೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹುದಾಗಿದೆ. ಮಗು ಹಾಗೂ ಕುಟುಂಬದ ಹೊಂದಾಣಿಕೆಯ ಆಧಾರದ ಮೇಲೆ ಮಕ್ಕಳ ಕಲ್ಯಾಣ ಸಮಿತಿಯು ಮಗುವನ್ನು 18 ವರ್ಷ ವಯಸ್ಸಿನವರೆಗೂ ಪೋಷಕತ್ವವನ್ನು ಮುಂದುವರೆಸಲು ಅವಕಾಶ ಕಲ್ಪಿಸುತ್ತದೆ.
ಪ್ರತಿಯೊಂದು ಮಗುವಿಗೆ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿರುತ್ತದೆ. ಆದರೆ ಕಾರಣಾಂತರಗಳಿoದ ಏಕ ಪೋಷಕ, ಅನಾಥ ಅಥವಾ ಕುಟುಂಬದ ಪೋಷಣೆಯಿಂದ ವಂಚಿತರಾದ ಮಕ್ಕಳು ಎಂಬಿತ್ಯಾದಿ ಸಂಕಷ್ಟದಲ್ಲಿರುವ ಮಕ್ಕಳನ್ನು ಸರಕಾರಿ ಮತ್ತು ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಅಂತಹ ಮಕ್ಕಳಿಗೆ ಪೋಷಕತ್ವ ಯೋಜನೆಯಡಿಯಲ್ಲಿ ಇತರೆ ಕುಟುಂಬದಲ್ಲಿ ಬೆಳೆಯಲು ಮಗುವಿನ ಹಿತ ದೃಷ್ಟಿಯಿಂದ ಮಕ್ಕಳ ಕಲ್ಯಾಣ ಸಮಿತಿಯು ತೀರ್ಮಾನವನ್ನು ತೆಗೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ 6 ರಿಂದ 18 ವರ್ಷದ ಒಳಗಿರಬೇಕು.
ವಿವಿಧ ರೀತಿಯ ಬೀದರ ಜಿಲ್ಲೆಯಲ್ಲಿ ಬಾಲನ್ಯಾಯ ಕಾಯ್ದೆಯಡಿಯಲ್ಲಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳನ್ನು ಹಾಗೂ ಪಾಲಕರು ತಮ್ಮ ಮಕ್ಕಳನ್ನು ರಕ್ಷಣೆ ಮತ್ತು ಪೋಷಣೆ ಮಾಡಲು ಅಸಮರ್ಥರಿದ್ದ ಸಂದರ್ಭದಲ್ಲಿ ಮಗುವಿನ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸಂಪರ್ಕಿಸಿದ್ದಲ್ಲಿ, ಇಂತಹ ಮಕ್ಕಳನ್ನು ಸಹ ಪೋಷಕತ್ವದಡಿ ತಾತ್ಕಾಲಿಕವಾಗಿ ಪಾಲನೆ ಮತ್ತು ಪೋಷಣೆ ಮಾಡಲಾಗುವುದು.
ಇಂತಹ ಮಕ್ಕಳನ್ನು ಪೋಷಕತ್ವ ಯೋಜನೆಯಡಿ ನೋಡಿಕೊಳ್ಳಲು ಆಸಕ್ತಿ ಇರುವ ಪೋಷಕರು ಅರ್ಜಿಯನ್ನು ಸಲ್ಲಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೈಲೂರ ಬೀದರ ಇವರಿಗೆ ಸಲ್ಲಿಸುವುದು. ದೂರವಾಣಿ ಸಂಖ್ಯೆ 08482-234003ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಸಂಕಷ್ಟದಲ್ಲಿರುವ ಮಕ್ಕಳ ಪೋಷಣೆಗೋಸ್ಕರ ಪೋಷಕತ್ವ ಯೋಜನೆಯಡಿ ಅರ್ಹ ಕುಟುಂಬ ಗುರುತಿಸಲು ಅರ್ಜಿ ಆಹ್ವಾನ?