ಸಂತ ಸೇವಾಲಾಲ ಮಹಾರಾಜರ ತತ್ವ, ಸಂದೇಶಗಳನ್ನುನಾವೇಲ್ಲರೂ ಪಾಲಿಸೋಣ- ಸಂಸದ ಸಾಗರ ಈಶ್ವರ ಖಂಡ್ರೆ

ಬೀದರ.16.ಫೆಬ್ರುವರಿ.25: – ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾವೇಲ್ಲರೂ ಮುನ್ನಡೆಯಬೇಕೆಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ಹೇಳಿದರು.


ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ 286ನೇ ಸಂತ ಸೇವಾಲಾಲ್ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸಂತ ಸೇವಾಲಾಲ ಮಹಾರಾಜರು ಮಹಾನ್ ಪವಾಡ ಪುರುಷರಾಗಿದ್ದರು, ಅವರು ಜನರ ಸಮಸ್ಯೆಗಳನ್ನು ಆಲಿಸಿಸುತ್ತಿದ್ದರು, ಮೂಡನಂಬಿಕೆ, ಕೆಟ್ಟ ಆಚರಣೆಗಳ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಿಗೆ ತಿಳಿವಳಿಕೆ ಮೂಡಿಸಿದರು. ಸಮಾಜದ ಐಕ್ಯತೆ ಮತ್ತು ಸಹಬಾಳ್ವೆಗೆ ಪ್ರೇರೆಪಿಸಿದರು. ಬ್ರೀಟಿಷರು ತೆರಿಗೆ ಹೆಚ್ಚಳ ಮಾಡಿದಾಗ ವೀರ ಸೇನಾನಿಯಾಗಿ ಹೋರಾಡಿದರು. ಯಾವುದೇ ಮಹಾನ ಪುರುಷರು ಒಂದೆ ಜಾತಿಗೆ ಸಿಮಿತವಿಲ್ಲ.

ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರು ಎಂದು ತಿಳಿಸಿದರು.


ಬೀದರ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಜಕುಮಾರ ಥಾವರಾ ಖೋಲಾ ಅವರು ತಮ್ಮ ಅತಿಥಿ ಉಪನ್ಯಾಸದಲ್ಲಿ ಮಾತನಾಡಿ, ಸಂತ ಸೇವಾಲಾಲ ಅವರು ದಾವಣಗೆರೆ ಜಿಲ್ಲೆಯ ಸುರಗೊಂಡನ ಕೊಪ್ಪದಲ್ಲಿ 1739ರ ಫೆಬ್ರವರಿ 15 ರಂದು ಶಿರಿಸಿಯ ಮಾರಿಕಾಂಬಾ ದೇವಿಯ ಕೃಪಾದಿಂದ ಜನಿಸಿದರು.

ಹೆಂಗಸರು, ಗಂಡಸರು ಭಾಯಿ(ಅಣ್ಣ) ಎನ್ನುವುದರಿಂದಾಗಿ ಆ ಜನ್ಮ ಬ್ರಹ್ಮಚಾರಿ ಜೀವನ ಕಳೆದರು. ಸಂತ ಪರಂಪರೆಯ ಕಡೆಗೆ ಒಲವು ಹೊಂದಿದ್ದ ಸೇವಾಲಾಲ ತನ್ನ ಪವಾಡಗಳಿಂದ ಸೇವಾ ಭಾಯಿ ಎಂದೇ ಪ್ರಸಿದ್ಧರಾದರು.

ಭವ್ಯ ಸಂಸ್ಕೃತಿ ಹೊಂದಿರುವ ಬಂಜಾರ ಸಮುದಾಯವನ್ನು ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಢಾಡಿ, ಢಾಲ್ಯ, ಸೋನಾರ್, ಲೋಹಾರ್ ಮುಂತಾದ ಅನೇಕ ಉಪನಾಮಗಳಿಂದ ಕರೆಯಲಾಗುತ್ತದೆ ಎಂದು ತಿಳಿಸಿದರು.


ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಶ್ರೀ ಸಂತ ಸೇವಾಲಾಲ ಮಹಾರಾಜನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಸೇವಲಾಲ ಮಾಹಾರಾಜರ ಭಾವಚಿತ್ರ ಮೆರವಣಿಗೆ ಪ್ರರಾಂಭಗೊಂಡು ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದಿಂದ ರಂಗಮಂದಿರದ ವರೆಗೆ ನಡೆಯಿತು.


ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತರಾದ ಮಹಮ್ಮದ ಶಕೀಲ, ಬಂಜಾರ ಶಕ್ತಿ ಪೀಠ ಸೇವಾ ನಗರದ ಗುರುಗಳಾದ ರಾಮ ಚೈತನ್ಯ ಮಹಾರಾಜರು , ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಪರಮೇಶ್ವರ್ ನಾಯಕ್, ಸಮಾಜದ ಮುಖಂಡರಾದ ಗೋವರ್ಧನ ರಾಥೋಡ್, ಬಸವರಾಜ ಪವಾರ್, ರಮೇಶಕುಮಾರ್ ಜಾಧವ, ಮಾಣಿಕರಾವ ಪವಾರ್ ಮತ್ತು ಇತರೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

6 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

16 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

21 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

21 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago