ಬೀದರ್ :24.ಜನವರಿ.25:-ಬೀದರ ನಗರದಲ್ಲಿ 75ನೇ ಗಣರಾಜ್ಯೋತ್ಸವ, ಭಾರತೀಯ ಸಂವಿಧಾನ ಜಾರಿಯಾದ ಸಂಭ್ರಮ ದಿನದ ನಿಮಿತ್ತ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಜನ ಜಾಗೃತಿ ಸಮಾವೇಶ ಹಾಗೂ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಮಾರುತಿ ಬೌದ್ಧೆ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಜೆ ಎನ್ ಯು ನ ಪ್ರಾಧ್ಯಾಪಕ ಡಾ.ಲಕ್ಷ್ಮಣ್ ಯಾದವ್ ಹಾಗೂ ಡಾ.ಜಯದೇವಿ ಗಾಯಕವಾಡ್ ಅವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಬಾಬುರಾವ್ ಪಾಸ್ವನ್ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಕೂಡ ನಾವು ಸಂವಿಧಾನ ಜಾರಿಗೆ ಬಂದ ದಿನ ಆಚರಿಸುತ್ತಿದ್ದೇವೆ. ಈ ವರ್ಷ ಎಲ್ಲ ದಲಿತ ಸಂಘಟನೆಗಳು ಒಗ್ಗೂಡಿ, ಬೃಹತ್ ಮಟ್ಟದಲ್ಲಿ ಸಮಾವೇಶ ಮಾಡುತಿದ್ದೇವೆ. ಹಾಗಾಗಿ ಜಿಲ್ಲೆಯ ಎಲ್ಲ ಸಮುದಾಯದ ಜನ ಸೇರಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸಮಿತಿಯ ಅಧ್ಯಕ್ಷ ವಿಷ್ಣುವರ್ಧನ್ ವಾಲ್ದೊಡ್ಡಿ ಮಾತನಾಡಿ, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಹಾಗೂ ಸಂವಿಧಾನದ ವಿಚಾರಗಳು ತಿಳಿದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಲಹಾ ಸಮಿತಿ ಪದಾಧಿಕಾರಿಗಳಾದ ಶ್ರಿಪತಾರಾವ್ ದೀನೆ, ಕಲ್ಯಾಣರಾವ್ ಭೋಸ್ಲೆ, ರಮೇಶ್ ಕಟ್ಟಿತುಗಾಂವ್, ಗೌರವಾಧ್ಯಕ್ಷ ಶಿವಕುಮಾರ್ ನೀಲಕಟ್ಟಿ, ಕಾರ್ಯಾಧ್ಯಕ್ಷ ಪ್ರೇಮಕುಮಾರ್ ಕಾಂಬ್ಳೆ, ಕಾರ್ಯದರ್ಶಿ ಅರುಣ್ ಪಟೇಲ್ ಹಾಗೂ ಅಂಬಾದಾಸ್ ಗಾಯಕವಾಡ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಪ್ರಜಾಪ್ರಭುತ್ವದ ಜನ ಜಾಗೃತಿ ಸಮಾವೇಶ ಹಾಗೂ ಬಹಿರಂಗ ಸಭೆ ಆಯೋಜಿಸಲಾಗಿದ
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…