ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ : ಆರ್.ಅಶೋಕ್

ಬೆಂಗಳೂರು: 03.ಫೆ.25: ಬೆಂಗಳೂರು ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ಸಮೀತಿ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧಪಕ್ಷ ನೇತಾ ಆರ್ ಅಶೋಕ್ ಮುಖ್ಯ ಅತಿಥಿ ಆಗಿ ಭಾಗ್ವಹಿಸಿದ್ರು.ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಭಗವದ್ಗೀತೆ ಇದ್ದಂತೆ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕಆರ್.ಅಶೋಕ್ ಹೇಳಿದ್ದಾರೆ.

ರವಿವಾರ ನಗರದ ಗಾಂಧಿಭವನದಲ್ಲಿ ಕರ್ನಾಟಕ ರಕ್ಷಣಾ ಸಮಿತಿಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಕನ್ನಡ ಪರ ಹೋರಾಟಗಾರ ಡಾ.ಚಿ.ನಾ.ರಾಮು ಅಭಿನಂದನೆ ಮತ್ತು ವಿವಿಧ ಕ್ಷೇತ್ರದಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ, ಅವರು ದೇಶದ ವಿಶ್ವಮಾನವ ಎಂದು ಬಣ್ಣಿಸಿದರು.

ಸಂವಿಧಾನ ಓದಿನಿಂದ ವಿದ್ಯಾವಂತರು, ಹೋರಾಟಗಾರರು, ಜನಪರ ಕಾಳಜಿ ಇರುವವರು ಸಮಾಜದಲ್ಲಿ ಆಗುತ್ತಿರುವ ತಪ್ಪುಗಳ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.

ಸಾಮಾಜಿಕ ಜಾಲತಾಣ, ಮಾಧ್ಯಮಗಳು ಮತ್ತು ಜನಸಾಮಾನ್ಯರು ಹೆಚ್ಚು ಹೆಚ್ಚು ಬಲಿಷ್ಠರಾಗುತ್ತಿದ್ದಾರೆ. ಭಾರತದಲ್ಲಿ ತುಳಿತಕ್ಕೊಳಗಾದ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂಬ ಅಂಬೇಡ್ಕರ್ ಚಿಂತನೆ ಈಗ ಬದಲಾಗಿದೆ. ಸಮಾಜದ ಪ್ರತಿಯೊಬ್ಬ ನಾಗರಿಕರು ಮೀಸಲಾತಿ ಕೇಳುತ್ತಿದ್ದಾರೆ. ಆದರೆ ಪ್ರತಿಯೊಬ್ಬರಿಗೂ ಮೀಸಲಾತಿ ನೀಡಿದರೆ ಅರ್ಥವಿಲ್ಲ ನುಡಿದರು.

ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮಾತನಾಡಿ, ಸಮಾಜದಲ್ಲಿ ಸೇವೆ ಮಾಡುವವರು ಸೇವೆ ಮಾಡುತ್ತಾರೆ, ಅಧಿಕಾರ ಚಲಾಯಿಸುವವರು ಕೇವಲ ಅಧಿಕಾರ ಚಲಾಯಿಸುತ್ತಾರೆ. ಹಣ, ಕೀರ್ತಿ, ಸೊಗಸಿನ ಅಧಿಕಾರದ ನಡುವೆ ಮನುಷ್ಯ ಸಿಲುಕದೆ ಸೇವೆ ಮಾಡುವಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಜೆನ್ನಿಫರ್ ಅಯ್ಯಪ್ಪ, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಚ್.ರವೀಂದ್ರ, ಸಮಾಜ ಸೇವಕ ಅನಿಲ್ ಮೆಣಸಿನಕಾಯಿ, ಬಿಬಿಎಂಪಿ ಸದಸ್ಯ ಎ.ಎಲ್.ಶಿವಕುಮಾರ್, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಪುರಸ್ಕೃತರಿಗೆ ಸನ್ಮಾನ: ಸಮಾಜ ಸೇವಾರತ್ನ ಪಡೆದ ಲಹರಿ ರೆಕಾರ್ಡಿಂಗ್‌ ಕಂಪೆನಿ ನಿರ್ದೇಶಕ ತುಳಸಿ ರಾಮ್ ನಾಯ್ಡು, ವಿದ್ಯಾರಣ್ಯಪುರ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಆರ್.ಅಶ್ವಥ್, ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ.ಜಗನ್ನಾಥರೆಡ್ಡಿ, ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಟಿ.ವೆಂಕಟೇಶ್ ಗೌಡ, ವಕೀಲ ಡಾ.ಸಿ.ಕೆ.ಮೌಲಾ ಷರೀಫ್, ಜಿ.ಕೆ.ಅಸೋಸಿಯೇಟ್ಸ್‍ನ ಸಂಸ್ಥಾಪಕ ಜಿ.ಕರ್ಣ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಜ್ಯ ವಿಧಾನಸಭೆ ವಿರೋಧಪಕ್ಷ ನೇತಾ ಆರ್ ಅಶೋಕ್ ಅವರು ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಹೇಳಿದ್ರು.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

7 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

10 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

10 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

10 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago