ಬೀದರ.28.ಫೆ.25:- ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ಅವರು ಇಂದು ಅನಾವರಣಗೊಳಿಸಿ ಮಾತನಾಡಿದರು.
ಸಂವಿಧಾನವು ನಮ್ಮ ದೇಶದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಆಧಾರಶಿಲೆಯಾಗಿದೆ. ಇದು ಭಾರತವನ್ನು ಸರ್ವೋಚ್ಛ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವು ಸಮಾನತೆ, ಬಾಂಧವ್ಯ ಮತ್ತು ನ್ಯಾಯದ ತತ್ವಗಳನ್ನು ಪ್ರತಿಪಾದಿಸಿ, ನಮ್ಮೆಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ.
ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ತತ್ವಗಳು ದೇಶದ ಪ್ರಗತಿಯ ದಾರಿದೀಪವಾಗಿವೆ. ಅವರ ಆದರ್ಶಗಳನ್ನು ಅನುಸರಿಸುವ ಮೂಲಕ ನಾವೆಲ್ಲರೂ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸ್ಥಾಪನೆಗೆ ಪ್ರಯತ್ನಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ರಹಿಂ ಖಾನ್, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಡಾ. ಚಂದ್ರಶೇಖರ್ ಪಾಟೀಲ್, ಭೀಮರಾವ್ ಪಾಟೀಲ್, ವೀರಣ್ಣ ಪಾಟೀಲ್, ಅಭಿಷೇಕ ಪಾಟೀಲ್ ಸೇರಿದಂತೆ ಸ್ಥಳೀಯ ಗಣ್ಯರು, ಮುಖಂಡರು, ಗ್ರಾಮಸ್ಥರು ಮತ್ತು ಅಂಬೇಡ್ಕರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…