29ಡಿ24 ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಗ್ರಾಮದ ಗುತ್ತೇದಾರ್ ಸಚಿನ್ ಪಾಂಚಾಳ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ ಗ್ರಾಮದ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಸಚಿನ್ ಮೌನಪ್ಪ ಪಾಂಚಾಳ (26) ಅವರ ಮನೆಗೆ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಸಚಿನ್ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಅವರು ಸಚಿನ್ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಸಚಿವರು, ಸಚಿನ್ ಆತ್ಮಹತ್ಯೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಅಲ್ಲದೆ ವೈಯಕ್ತಿಕವಾಗಿ ಮತ್ತು ಸರ್ಕಾರದ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಈಗಾಗಲೇ ರೈಲ್ವೆ ಪೊಲೀಸರು ಈ ವಿಚಾರದಲ್ಲಿ ತನಿಖೆ ನಡೆಸುತ್ತಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರಲಾಗುವುದು ಎಂದು ಹೇಳಿದರು.
ಇದರಲ್ಲಿ ಯಾರೇ ತಪ್ಪಿತಸ್ಥಿರಿದ್ದರು. ಎಂತಹುದೇ ಪ್ರಭಾವಿಗಳಿದ್ದರೂ ಅವರನ್ನು ಸರ್ಕಾರ ಶಿಕ್ಷೆಗೆ ಗುರಿಪಡಿಸಲಿದೆ ಎಂದರು. ನಿಮ್ಮ ಕುಟುಂಬಕ್ಕೆ ಕ್ಷೇತ್ರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುವ ಪ್ರಯತ್ನ ಮಾಡುವೆ.
ಸಚಿನ್‌ಗೆ ಅನ್ಯಾಯವಾಗಿದ್ದರೆ ಅದನ್ನು ಸರ್ಕಾರದ ಗಮನಕ್ಕೆ ತರಬಹುದಾಗಿತ್ತು ಎಂದ ಅವರು, ಆದರೂ ಸರ್ಕಾರ ನಿಮ್ಮ ಕುಟುಂಬದೊAದಿಗೆ ಇರಲಿದೆ ಎಂದು ಭರವಸೆ ನೀಡಿದರು.
ಡೆತ್ ನೋಟ್ ಬಗ್ಗೆ ಎಫ್.ಎಸ್.ಎಲ್ ವರದಿ ಬರಲಿ ಅದನ್ನು ನೋಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಕುಟುಂಬಕ್ಕೆ ಆತ್ಮಸ್ಥೆöÊರ್ಯ ಕೊಡಲು ಎಲ್ಲರು ಮುಂದಾಗಬೇಕು. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ನೆಲದ ಕಾನೂನು ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಚನ್ ಅವರ ತಂದೆ ಮೌನಪ್ಪ ಪಾಂಚಾಳ, ತಾಯಿ ಈರಮ್ಮ, ಸಹೋದರಿಯರಾದ ಸಂಗೀತಾ, ಸುರೇಖಾ, ಸುಜಾತಾ, ಸುನಿತಾ ಹಾಗೂ ಸವಿತಾ ಸೇರಿದಂತೆ ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದರು.
ಸಚಿವರು 10 ಲಕ್ಷ ಲೋಷಣೇ ಮಾಡಿದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…