ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ 3 ತಿಂಗಳ ನಂತರ್ ಆರೋಪಿ ಅರೆಸ್ಟ್.

ಬೆಳಗಾವಿ.17.ಏಪ್ರಿಲ್.25:- ಕಳೆದ 14.ಜನವರಿ.2025  ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಪಘಾತಕ್ಕೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು  3 ತಿಂಗಳು ಬಳಿಕ ಅರೆಸ್ಟ್ ಮಾಡಿದ್ದಾರೆ.

ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶಿ ಎಂದು ತಿಳಿದುಬಂದಿದೆ ಕಳೆದ ಕೆಲದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶ(65) ಎಂದು ಗುರುತಿಸಲಾಗಿದ್ದು ಈತ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮೂಲದವನು ಎನ್ನಲಾಗಿದೆ.
ಈ ಕೇಸ್ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಚಿವರ ಕಾರಿಗೆ ತಾಗಿದ್ದ ಲಾರಿಯ ಬಣ್ಣ ಸೇರಿದಂತೆ ಅಪಘಾತದ ಸ್ಥಳದಲ್ಲಿ ಸಿಕ್ಕ ಎಲ್ಲಾ ಸಾಕ್ಷಿಗಳನ್ನು ಎಫ್‌ಎಸ್‌ಎಲ್ ಗೆ ರವಾನೆ ಮಾಡಿದ್ದರು.ಅಂತಿಮವಾಗಿ ಸಿಸಿಟಿವಿ ದೃಶ್ಯ ಆಧರಿಸಿ ಈಗ ಲಾರಿ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಲಾಗಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

6 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

7 hours ago