ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಗ್ರಾಮದ ಮೃತ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಭೇಟಿ ನೀಡಿದಾಗ ಸಚಿನ್ ಅವರ ಸಹೋದರಿಯರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಪೊಲೀಸ್ ಠಾಣೆಯಲ್ಲಿ ಗುತ್ತೇದಾರ್ ಸಚಿನ್ ಸಾವಿಗೂ ಮುನ್ನ ಆತನನ್ನು ಹುಡುಕಿಕೊಡುವಂತೆ ಠಾಣೆಗೆ ಹೋದಾಗ ಪೊಲೀಸರು ಸ್ಪಂದಿಸಲಿಲ್ಲ .
ನಮಗೆ ಅವರು ದೂರು ಸ್ವೀಕರಿಸಿ ಹುಡುಕಿದರೆ ಆತ್ಮಹತ್ಯೆ ತಡೆಯಬಹುದಿತ್ತು ಆದರೆ ಅವರು ನಮಗೆ ಸ್ಪಂದಿಸಿಲ್ಲ. ಡೆತ್ ನೋಟ್ ನಲ್ಲಿದ್ದವರನ್ನು ಬಂಧಿಸದ ಪೊಲೀಸರು ಈಗೇಕೆ ಬಂದಿದ್ದಾರೆ. ಮೊದಲು ಅವರನ್ನು ಹೊರಗೆ ಕಳಿಸಿ ಎಂದು ಸಚಿವರ ಸಮ್ಮುಖದಲ್ಲೇ ಆಕ್ರೋಶ ಹೊರಹಾಕಿ ಪಟ್ಟು ಹಿಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಜೆ.ಎಸ್. ನ್ಯಾಮೆಗೌಡ ಸೇರಿದಂತೆ ಇತರೆ ಪೊಲೀಸರು ಮನೆಯಿಂದ ಹೊರಹೋದರು.ಬಳಿಕ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ವೈಯಕ್ತಿಕ ಹಾಗೂ ಸರ್ಕಾರದಿಂದ ಜಂಟಿಯಾಗಿ ಹತ್ತು ಲಕ್ಷ ಪರಿಹಾರ ಕುಟುಂಬಕ್ಕೆ ನೀಡಲಾಗುವುದು. ಅವರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವುದರ ಬಗ್ಗೆ ಸಿಎಂ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಗುತ್ತೇದಾರ್ ಸಚಿನ್ ಪಾಂಚಾಳ ಕುಟುಂಬದವರು ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಜತೆ ಚರ್ಚಿಸಿ ಮನವಿ ಮಾಡುವೆ. ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಲಾಗುವುದು. ಈಗಾಗಲೇ ತನಿಖೆ ಪ್ರಗತಿಯಲ್ಲಿದೆ. ತನಿಖೆ ನಂತರ ಯಾರ ತಪ್ಪಿದೆಯೋ ಅವರಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕುಟುಂಬದವರು ಈ ವಿಷಯದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು. ದುಃಖದಲ್ಲಿರುವ ಕುಟುಂದವರಿಗೆ ಸಾಂತ್ವನ, ಧೈರ್ಯದ ಅಗತ್ಯವಿದೆ. ನಮ್ಮ ಸರ್ಕಾರ ಅವರೊಂದಿಗೆ ಇದೆ. ನಾನು ಬೆಳಗಾವಿಯಲ್ಲಿದ್ದ ಕಾರಣ ಭೇಟಿ ಮಾಡಲು ಅಗಿರಲಿಲ್ಲ. ನಿನ್ನೆ ತಡರಾತ್ರಿ ಬಂದಿದ್ದೇನೆ ಎಂದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…