ಕೊಪ್ಪಳ.18.ಜೂನ್.25:- ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಕ್ಯಾಬಿನೆಟ್ ಸಚಿವರಾದ ಶಿವರಾಜ್ ತಂಗಡಗಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಎಎಸ್‌ಐಗೆ ಗಂಭೀರ ಗಾಯಗಳಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ ಈ ಘಡನೆ ನಡೆದಿದ್ದು, ಸಚಿವರು ಕನಕಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಎಎಸ್‌ಐಗೆ ಗಂಭೀರ ಗಾಯಗಳಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ ಈ ಘಡನೆ ನಡೆದಿದ್ದು, ಸಚಿವರು ಕನಕಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸಚಿವ ಶಿವರಾಜ್ ತಂಗಡಗಿ ಅವರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ರಾತ್ರಿ 7.30ರ ಸುಮಾರಿಗೆ ಪ್ರಯಾಣಿಸುತ್ತಿದ್ದರು. ಸಕಲಾಪುರಹಟ್ಟಿ ಗೊಲ್ಲರಹಟ್ಟಿ ಕ್ರಾಸ್ ಬಳಿ ಅವರ ಬೆಂಗಾವಲು ವಾಹನವು ಓವರ್ ಟೇಕ್ ಮಾಡಿ ಮುಂದೆ ಬಂದಾಗ ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ. ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಗಂಗಾವತಿಯಲ್ಲಿ ಸಂಜೆವರೆಗೂ ಕೆಡಿಪಿ ಸಭೆ ನಡೆಸಿದ ಸಚಿವರು ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ. ಇನ್ನು ಗಾಯಾಳು ಎಎಸ್‌ಐ ಅನ್ನು ಹುಲಿಯಪ್ಪ ಎಂದು ಗುರುತಿಸಲಾಗಿದ್ದು, ಅವರನ್ನು ತಕ್ಷಣ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಸಚಿವರು ದಾಖಲಿಸಲಾಗಿದೆ. ಇನ್ನು ವಾಹನದ ಚಾಲಕ ಅಮರೇಶ್ ಗೆ ಯಾವುದೇ ತೊಂದರೆಯಾಗಿಲ್ಲ. ಕೂಡ್ಲಿಗಿ ಉಪ ವಿಭಾಗದ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಸಚಿವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…