ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು 27.03.2025

ಬೆಂಗಳೂರು.27.ಮಾರ್ಚ್.25:-ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಗದಗ ಜಿಲ್ಲೆಯ ಗದಗ ಪಟ್ಟಣದಲ್ಲಿ ಪೀಠೋಪಕರಣಗಳ ಸಹಿತ ಹೊಸ “ಪ್ರಜಾಸೌಧ” ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ತೀರ್ಮಾನ

• ಸಿಎನ್‌ಸಿ ಟೆಕ್ನಾಲಜಿ ಕ್ಷೇತ್ರದ ಶ್ರೇಷ್ಠತಾ ಕೇಂದ್ರವನ್ನು (ಸೆಂಟರ್ ಆಫ್ ಎಕ್ಸಲೆನ್ಸ್) ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ಕಲಬುರಗಿಯಲ್ಲಿ ರೂ.16 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ

• ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೆಯ ಕಟ್ಟಡದ ಜಾಗದಲ್ಲಿ ಹೊಸದಾಗಿ ವಸತಿ ಶಾಲಾ ಕಟ್ಟಡವನ್ನು ರೂ. 25 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ

• ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ರೂ.1,292 ಕೋಟಿಗಳ ಅಂದಾಜು ವೆಚ್ಚದ ಕಾಮಗಾರಿಗೆ ಅನುಮೋದನೆ

• ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿಗೆ ಅನುಮೋದನೆಯಾಗಿರುವ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಒಟ್ಟಾರೆ ರೂ. 37.98 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ

• ಬಿಯಾಂಡ್ ಬೆಂಗಳೂರು ಕ್ಲಸ್ಟರ್ಸ್ ಸೀಡ್ ಫಂಡ್‌ಗಳನ್ನು (ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ) ವಿಲೀನಗೊಳಿಸಲು ಮತ್ತು ರೂ.75 ಕೋಟಿ ಅಂದಾಜು ವೆಚ್ಚದಲ್ಲಿ ನವೋದ್ಯಮಗಳಿಗಾಗಿ ಒಂದು ಸಂಯೋಜಿತ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಅನ್ನು ಸ್ಥಾಪಿಸಲು ಅನುಮೋದನೆ

• ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಗ್ರಾಮದಲ್ಲಿರುವ ಹಜರತ್ ಫಖೀ-ಷಾ-ವಲಿ ದರ್ಗಾದ ಅಭಿವೃದ್ಧಿ ಕೈಗೆತ್ತಿಕೊಳ್ಳಲು ಹಾಗೂ ಮೂಲಭೂತ ಸೌಕರ್ಯ ಒದಗಿಸುವ ರೂ.31.99 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳನ್ನು ಮುಂದಿನ 3 ವರ್ಷಗಳಲ್ಲಿ ಕೈಗೊಳ್ಳಲು ನಿರ್ಧಾರ .

“ಪ್ರಜಾಸೌಧ” ಚಿಂಚೋಳಿ ತಾಲೂಕು ಆಡಳಿತ ಕೇಂದ್ರ ಕಟ್ಟಡ ಕಾಮಗಾರಿಗೆ ಈಗಾಗಲೇ ರೂ.10 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಒಳಗೊಂಡಂತೆ ಸದರಿ ಕಾಮಗಾರಿಯ Work slip/EIRL ಹಾಗೂ ಜಿ.ಎಸ್.ಟಿ ವ್ಯತ್ಯಾಸದ ಮೊತ್ತ ರೂ. 91.62 ಲಕ್ಷಗಳ ಅಂದಾಜು ಮೊತ್ತ ಸೇರಿದಂತೆ ಒಟ್ಟಾರೆ ರೂ.10.91 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ ಹಾಗೂ ಅನುದಾನ ಬಿಡುಗಡೆಗೆ ನಿರ್ಧಾರ

ಗದಗಿನ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮಕೆ.ಎಚ್. ಪಾಟೀಲ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಮರುನಾಮಕರಣ ಮಾಡಲು ನಿರ್ಧಾರ

• ಬೆಂಗಳೂರಿನ ಸರ್ಕಾರಿ ಯುನಾನಿ ಮತ್ತು ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪುರುಷರ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಯ ರೂ. 11.70 ಕೋಟಿಗಳ ಪರಿಷ್ಕೃತ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ

• ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಆಲಮೇಲದಲ್ಲಿ ಹೊಸ ತೋಟಗಾರಿಕೆ ಕಾಲೇಜು ಅನ್ನು ಸ್ಥಾಪಿಸಲು ಹಂತ ಹಂತವಾಗಿ ಒಟ್ಟು ರೂ.145 ಕೋಟಿ ಅಂದಾಜು ವೆಚ್ಚವನ್ನು ಭರಿಸಲು ತೀರ್ಮಾನಿಸಲಾಗಿದ್ದು, ರೂ.39 ಕೋಟಿ ವೆಚ್ಚದಲ್ಲಿ ಮೊದಲನೇ ಹಂತದಲ್ಲಿ ಆಡಳಿತ ಮತ್ತು ಶೈಕ್ಷಣಿಕ ಭವನ ನಿರ್ಮಾಣ ಮಾಡಲು ತೀರ್ಮಾನ

• ಕೆಕೆಆರ್‌ಡಿಬಿ ನಿಧಿಯಡಿ ಕಲ್ಯಾಣ ಕರ್ನಾಟಕ ಪ್ರದೇಶದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಿವಿಧ ರಸ್ತೆಗಳ ನಿರ್ಮಾಣ ಕಾಮಗಾರಿಯನ್ನು ರೂ. 47 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ

• ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಮಸಗೋಡು – ಯಲಕನೂರು – ಕಣಿವೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ರೂ.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

• ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನೂತನ

“ಪ್ರಜಾಸೌಧ” ತಾಲೂಕು ಆಡಳಿತ ಕೇಂದ್ರ ಕಟ್ಟಡಗಳನ್ನು ತಲಾ ರೂ.16 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ

• ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಆಡಳಿತ ಕೇಂದ್ರ ಕಟ್ಟಡ “ಪ್ರಜಾಸೌಧ” ನಿರ್ಮಿಸಲು ರೂ.56.48 ಕೋಟಿಗಳ ಪರಿಷ್ಕೃತ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ

• ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ”ಯನ್ನು ಕೆಲವು ಮಾರ್ಪಾಡುಗಳೊಂದಿಗೆ ಜಾರಿಗೊಳಿಸಲು ತೀರ್ಮಾನ

• ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ರಾಜ್ಯದ ಪ್ರಮುಖ ಜಲಾಶಯಗಳ ನಿರ್ವಹಣೆಯನ್ನು ಕಂದಾಯ ಇಲಾಖೆಗೆ ವಹಿಸಲು ತೀರ್ಮಾನ.

• ವಿಜಯಪುರ ಜಿಲ್ಲೆಯ ವಿಜಯಪುರ ನಗರಕ್ಕೆ ಆಲಮಟ್ಟಿ ಹಿನ್ನೀರಿನಿಂದ ನೀರು ಸರಬರಾಜು ಮಾಡುವ ಕೊಳವೆ ಮಾರ್ಗಕ್ಕೆ ಎಂಎಸ್ ಪೈಪ್ ಅಳವಡಿಕೆ ಮಾಡಲು ರೂ. 50 ಕೋಟಿ ವೆಚ್ಚದ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ

• ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೈಸೂರು ಡಾ. ಬಿ.ಆರ್. ಅಂಬೇಡ್ಕರ್ ಭವನದ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ರೂ.23 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ

prajaprabhat

Recent Posts

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

4 minutes ago

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ

ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…

19 minutes ago

ಒಳಮೀಸಲಾತಿ ತೀರ್ಮಾನ ನಂತರ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ  ಮಾಡಲಾಗುವುದು.

ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…

51 minutes ago

ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ  ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ…

1 hour ago

ಭಾರತೀಯ ರೈಲ್ವೆಯಲ್ಲಿ 3,115 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು.11.ಆಗಸ್ಟ್.25:- ಪೂರ್ವ ರೈಲ್ವೆಯಲ್ಲಿ 3,115 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ರಿಂದ ಸೆಪ್ಟೆಂಬರ್ 13,…

2 hours ago

ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ.

ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…

8 hours ago