ಔರಾದ.19.ಜನವರಿ.25:- ಸಮಾನ ಮನಸ್ಕರು, ಅನ್ಯಾಯ, ಅವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವವರು ಒಗ್ಗಟ್ಟಾಗಿ ಸಮ ಸಮಾಜ ನಿರ್ಮಾಣಕ್ಕಾಗಿ ಹೋರಾಟ ಮಾಡುತ್ತಿದ್ದೇವೆ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.
ಪಟ್ಟಣದ ಕನ್ನಡ ಭವನದಲ್ಲಿ ಭಾನುವಾರ ಸಮಾನ ಮನಸ್ಕರ ಜೊತೆಗಿನ ಸಂವಾದ ಕಾರ್ಯಕ್ರದಲ್ಲಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್, ಪೆರಿಯಾರ್ ಹಾಗೂ ಕಾನ್ಸಿರಾಮ್ ಬಿಟ್ಟರೆ ಸಮ ಸಮಾಜ ಕಟ್ಟಲು ಯಾರೂ ಮುಂದೆ ಬರಲಿಲ್ಲ. ರಾಜಕಾರಣಿಗಳು ಅಧಿಕಾರದಾಸೆ ಇಟ್ಟುಕೊಂಡು ಬರುತ್ತಾರೆ. ಸಮ ಸಮಾಜ ಕಟ್ಟುವ ಇಚ್ಛಾಶಕ್ತಿ ಅವರಲ್ಲಿಲ್ಲ. ಪರ್ಯಾಯ ರಾಜಕಾರಣದಿಂದ ಮಾತ್ರ ಸಮ ಸಮಾಜ ಕಟ್ಟಲು ಸಾಧ್ಯ’ ಎಂದರು.
‘ರಾಜ್ಯದ ವಿವಿಧ ಮತಕ್ಷೇತ್ರಗಳಲ್ಲಿ ಜನಪರ ಸಂಘಟನೆಗಳ ಪ್ರಮುಖರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದೇವೆ. ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕ, ಮುಖ್ಯಮಂತ್ರಿ ಆಗಬೇಕೆಂಬ ಕನಸು ಇಲ್ಲ. ಆದರೆ ಸಿದ್ಧಾಂತ ಮುನ್ನಡೆಸುವ ಜವಾಬ್ದಾರಿ ಮಾತ್ರ ನಮ್ಮದು’ ಎಂದು ಹೇಳಿದರು.
‘ಇಂದಿನ ರಾಜಕಾರಣ ಅಧಿಕಾರ ಪಡೆಯುವ ಏಕೈಕ ಗುರಿ ಹೊಂದಿದೆ. ಹೀಗಾಗಿ ಪಕ್ಷಗಳು ಜಾತಿಗಳೊಂದಿಗೆ ಕೈಜೋಡಿಸಿ ಓಲೈಸುತ್ತಿವೆ. ದಲಿತ, ಒಬಿಸಿ, ಆದಿವಾಸಿ ಹಾಗೂ ಬಹುಜನರಿಗೆ ಆಗಿರುವ ಅನ್ಯಾಯ ಸರಿಪಡಿಸುವ ಆಲೋಚನೆ ಇಂದಿನ ಪಕ್ಷಗಳಿಗೆ ಇಲ್ಲ. ಅಧಿಕಾರ ಹಿಡಿಯಲು ಏನು ಬೇಕಾದರೂ ಮಾಡುತ್ತಾರೆ. ಅಧಿಕಾರ ಸಿಕ್ಕ ನಂತರ ಏನು ಮಾಡಬೇಕು ಎಂಬುದನ್ನು ಮರೆಯುತ್ತಾರೆ. ಹೀಗಾಗಿ ರಾಜ್ಯಕ್ಕೆ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್ ಹಾಗೂ ಕುವೆಂಪು ಅವರ ಆದರ್ಶ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವು ಹೋರಾಡುತ್ತಿದ್ದೇವೆ’ ಎಂದು ಹೇಳಿದರು.
ಸಂವಾದದಲ್ಲಿ ಸಂಯೋಜಕ ಸುಭಾಷ ಲಾಧಾ, ಸುಧಾಕರ್ ಕೊಳ್ಳೂರ್, ಗಣಪತಿ ವಾಸುದೇವ, ಶಿವು ಕಾಂಬಳೆ, ನಂದಾದೀಪ ಬೋರಾಳೆ, ಮನ್ಮಥ ಡೋಳೆ, ಕಪಿಲ್ ಗೋಡಬೋಲೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…