ಔರಾದ.20.ಮೇ.25:- ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರಕಾರದ 2 ವರ್ಷಗಳ ಸಾಧನೆ ತೀವ್ರ ನಿರಾಶಾದಾಯಕವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಭು ಬಿ.ಚವ್ಹಾಣ ಅವರು ಆರೋಪಿಸಿದ್ದಾರೆ.
ಹೊಸಪೇಟೆಯಲ್ಲಿ ಸರಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ವಿದ್ಯುತ್, ಪೆಟ್ರೋಲ್, ಡಿಸೇಲ್, ಹಾಲಿನಂತಹ ದಿನಬಳಕೆ ವಸ್ತುಗಳ ಬೆಲೆಗಳನ್ನು ಏರಿಸಿ ಬಡ ಜನರನ್ನು ಸಂಕಷ್ಟಕ್ಕೆ ದೂಡಿ ಸಾಧನಾ ಸಮಾವೇಶ ಆಯೋಜಿಸುತ್ತಿರುವುದು ಸರಕಾರದ ಅಸಫಲ ತೆಯ ಸಮಾವೇಶದಂತೆ ಭಾಸವಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಸರಕಾರ ಅಭಿವೃದ್ಧಿಯನ್ನೇ ಮರೆತಿದೆ. ರಾಜ್ಯದಲ್ಲಿ ಅರಾಜಕತೆ ವಿಪರೀತವಾಗಿ ಹೆಚ್ಚುತ್ತಿದೆ.
ಗ್ಯಾರಂಟಿ ಹೆಸರಿನಲ್ಲಿ ಒಂದು ಕಡೆ ಕೊಟ್ಟು ಮತ್ತೊಂದು ಕಡೆಯಿಂದ ದುಪ್ಪಟ್ಟು ವಸೂಲಿ ಮಾಡಲಾಗುತ್ತಿದೆ. ಪರಿಶಿಷ್ಟರ ಹಣ ದುರ್ಬಳಕೆ, ವಾಲ್ಮೀಕಿ ಹಗರಣ ಸೇರಿದಂತೆ ನಾನಾ ಅವಾಂತರಗಳನ್ನು ಮಾಡಿದ ಸರಕಾರದ ಸಾಧನೆ 2 ವರ್ಷಗಳಲ್ಲಿ ಹೇಳಿಕೊಳ್ಳುವಂತಹದ್ದು ಏನು ಇಲ್ಲವೆಂದು ಹೇಳಿದ್ದಾರೆ.
ಸರಕಾರದ ಬಗ್ಗೆ ಬಡವರು, ರೈತರು, ಶ್ರಮಿಕರು ರೋಸಿ ಹೋಗಿದ್ದಾರೆ. ಹಿಂದುಗಳ ಹತ್ಯೆ, ಧಾರ್ಮಿಕ ನಂಬಿಕೆಗಳ ಮೇಲೆ ಪ್ರಹಾರದಂತಹ ಅನ್ಯಾಯಗಳು ನಿರಂತರವಾಗಿ ನಡೆಯುತ್ತಿವೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…