ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರವೇಶಾತಿ ಪ್ರಮನ ಹೆಚ್ಚಿಸಬೇಕು.!

ಬೆಂಗಳೂರು: 03.ಫೆ.25: ಉನ್ನತ ಶಿಕ್ಷಣ ಇಲಾಖೆ,ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ದರ ಕಡಿಮೆ ಆಗುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಬಾರಿ ಸರಕಾರಿ ಕಾಲೇಜುಗಳಲ್ಲಿ ದಾಖಲಾತಿಯ ಪ್ರಮಾಣ/ದರ ಹೆಚ್ಚಿಸಲೇಬೇಕೆಂದು ಪಣ ತೊಟ್ಟಿರುವ ಕಾಲೇಜು ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳನ್ನು ಆಕರ್ಷಿಸಲು “ಪ್ರವೇಶಾತಿ ಅಭಿಯಾನ’ ನಡೆಸುವ ತೀರ್ಮಾನಕ್ಕೆ ಬಂದಿದೆ.

ರಾಜ್ಯದ ಒಟ್ಟು 440 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಾಲ್ಕೈದು ವರ್ಷಗಳಿಂದ 18 ಸಾವಿರದಿಂದ 20 ಸಾವಿರದ ಆಸುಪಾಸಿನಲ್ಲಿ ದಾಖಲಾತಿ ಆಗುತ್ತಿದೆ. ಈ ಪೈಕಿ ಸುಮಾರು 100 ಕಾಲೇಜುಗಳಲ್ಲಿ 100ಕ್ಕಿಂತ ಕಡಿಮೆ ದಾಖಲಾತಿ ಆಗುತ್ತಿದೆ. ದ್ವಿತೀಯ ಪಿಯುಸಿಯಲ್ಲಿ ಶೇ. 70 ಮೀರಿದ ಫ‌ಲಿತಾಂಶ ದಾಖಲಾಗಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದರೂ ಸರಕಾರಿ ಕಾಲೇಜುಗಳಲ್ಲಿನ ದಾಖಲಾತಿ ಹೆಚ್ಚಳವಾಗುತ್ತಿಲ್ಲ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆಯು ಮಂಗಳೂರು ವಿಭಾಗ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗದ ಎಲ್ಲ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು ಮತ್ತು ಬೆಂಗಳೂರು, ಮೈಸೂರು, ಧಾರವಾಡ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳ ಜಂಟಿ ನಿರ್ದೇಶಕರ ಜತೆ ಸರಕಾರಿ ಕಾಲೇಜುಗಳಲ್ಲಿನ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದ್ದಾರೆ.

ಲಿಂಗಾನುಪಾತ ಸರಿದೂಗಿಸಲು ಸೂಚನೆ
ಉನ್ನತ ಶಿಕ್ಷಣದಲ್ಲಿ ಲಿಂಗ ಅನುಪಾತವನ್ನು ಸರಿದೂಗಿಸುವುದು ಉನ್ನತ ಶಿಕ್ಷಣ ಇಲಾಖೆ ಮತ್ತು ಸರಕಾರದ ಪ್ರಮುಖ ಗುರಿಯಾಗಿದೆ.

ಈ ಹಿನ್ನೆಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ರವಾನಿಸುವಂತೆ ಸೂಚಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್‌. ಮಂಜುಶ್ರೀ ತಿಳಿಸಿದ್ದಾರೆ.

ಡ್ರಾಪ್‌ ಔಟ್‌ ಆದರೆ ಪ್ರಾಂಶುಪಾಲರೇ ಹೊಣೆ
ಸರಕಾರಿ ಕಾಲೇಜುಗಳಲ್ಲಿ ಮೊದಲ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿಗಳ ಡ್ರಾಪ್‌ ಔಟ್‌ ಪ್ರಮಾಣ ವಿಪರೀತ ಇರುವ ಬಗ್ಗೆ ಕಳವಳ ವ್ಯಕ್ತವಾಗಿದೆ. ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳ ಡ್ರಾಪ್‌ ಔಟ್‌ ಆದರೆ ಅದಕ್ಕೆ ಪ್ರಾಂಶುಪಾಲರನ್ನೇ ಹೊಣೆ ಮಾಡಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಪಿಯು ಕಾಲೇಜುಗಳಿಗೆ ಭೇಟಿ ನೀಲು ಸೂಚನೆ
ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು ಅಥವಾ ಖಾಯಂ ಉಪನ್ಯಾಸಕರ ತಂಡ ತಮ್ಮ ಸಮೀಪದ ಸರಕಾರಿ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸವಲತ್ತು, ಉಪನ್ಯಾಸಕ ಸಿಬಂದಿಯ ನೈಪುಣ್ಯದ ಬಗ್ಗೆ ಮಾಹಿತಿ ನೀಡಬೇಕು.

ಹಾಗೆಯೇ ಸರಕಾರಿ ಕಾಲೇಜುಗಳಲ್ಲಿನ ಸೌಲಭ್ಯಗಳ ಬಗ್ಗೆ ತಿಳಿ ಹೇಳುವ ಜತೆಗೆ ಪಿಯು ಕಾಲೇಜುಗಳ ನೋಟಿಸ್‌ ಬೋರ್ಡ್‌ನಲ್ಲಿ ಮಾಹಿತಿ ಲಗತ್ತಿಸುವಂತೆ ಸೂಚಿಸಲಾಗಿದೆ.

ದಾಖಲಾತಿ ವೇಳೆ ಖಾಯಂ ಉಪನ್ಯಾಸಕ ಇರಬೇಕು
ಪ್ರಥಮ ದರ್ಜೆ ಕಾಲೇಜುಗಳಲ್ಲಿನ ದಾಖಲಾತಿ ಪ್ರಕ್ರಿಯೆ ನಡೆಯವ ಸಂದರ್ಭದಲ್ಲಿ ಖಾಯಂ ಉಪನ್ಯಾಸಕರೊಬ್ಬರು ಉಪಸ್ಥಿತರಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಈ ಖಾಯಂ ಉಪನ್ಯಾಸಕರು ಕೋರ್ಸ್‌ಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಒಂದು ವೇಳೆ ವಿದ್ಯಾರ್ಥಿಗಳ ದಾರಿ ತಪ್ಪಿಸುವ ಮಾಹಿತಿ ನೀಡಿದರೆ ಕಠಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಭೆಯಲ್ಲಿ ನೀಡಲಾಗಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚಿನ ಅರ್ಹತೆ ಹೊಂದಿರುವ ಉಪನ್ಯಾಸಕರಿದ್ದಾರೆ. ಜತೆಗೆ ಉತ್ತಮ ಸೌಲಭ್ಯಗಳೂ ಇವೆ. ಆದರೂ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಹೆಚ್ಚುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರವೇಶಾತಿ ಅಭಿಯಾನ ನಡೆಸುವಂತೆ ಸೂಚಿಸಿದ್ದೇವೆ.

– ಎನ್‌. ಮಂಜುಶ್ರೀ, ಆಯುಕ್ತೆ, ಕಾಲೇಜು ಶಿಕ್ಷಣ ಇಲಾಖೆ

65 ಸರಕಾರಿ ಕಾಲೇಜುಗಳಿಗೆ ನ್ಯಾಕ್‌ ಮೌಲ್ಯಮಾಪನ ಪಡೆಯಲು ಸಿದ್ಧತೆ
ರಾಜ್ಯದ ಒಟ್ಟು 68 ಪ್ರಥಮ ದರ್ಜೆ ಕಾಲೇಜುಗಳಿಗೆ “ನ್ಯಾಕ್‌’ ಮೌಲ್ಯಮಾಪನ ಅಥವಾ ಮರು ಮೌಲ್ಯಮಾಪನಕ್ಕೆ ಒಳಗಾಗುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಆಯುಕ್ತೆ ಎನ್‌. ಮಂಜುಶ್ರೀ ಸೂಚನೆ ನೀಡಿದ್ದಾರೆ.

ಪ್ರತೀ ಉನ್ನತ ಶಿಕ್ಷಣ ಸಂಸ್ಥೆ ನ್ಯಾಕ್‌ ಮೌಲ್ಯಮಾಪನಕ್ಕೆ ಒಳಗಾಗುವುದು ಕಡ್ಡಾಯವಾಗಿದ್ದು, ಮುಂದಿನ ನ್ಯಾಕ್‌ ಆವೃತ್ತಿಗೆ (2025-26) ತೆರಳಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ನ್ಯಾಕ್‌ ಮೌಲ್ಯಮಾಪನಕ್ಕೆ ಒಳಗಾಗದ, ಮರು ಮೌಲ್ಯಮಾಪನಕ್ಕೆ ಒಳಗಾಗಬೇಕಾದ ಸಂಸ್ಥೆಗಳು ತಮ್ಮ ಮಾಹಿತಿಯನ್ನು ದಾಖಲೆಗಳ ಸಹಿತ ಕೇಂದ್ರ ಕಚೇರಿಯ ರಾಜ್ಯ ಗುಣಮಟ್ಟ ಭರವಸೆ ಕೋಶ ವಿಭಾಗಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ 46 ಪ್ರಥಮ ದರ್ಜೆ ಕಾಲೇಜುಗಳು ಒಮ್ಮೆಯೂ ನ್ಯಾಕ್‌ ಮಾನ್ಯತೆಗೆ ಒಳಗಾಗಿಲ್ಲ. ಇನ್ನು 21 ಕಾಲೇಜುಗಳ ನ್ಯಾಕ್‌ ಮಾನ್ಯತೆ ಮುಕ್ತಾಯಗೊಂಡಿದ್ದು, ಮರು ಮೌಲ್ಯಮಾಪನಕ್ಕೆ ಒಳಗಾಗಬೇಕಿದೆ.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

9 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

12 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

12 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

12 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

12 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

12 hours ago