ಸರಕಾರಿ ಪ್ರಥಮ ದರ್ಜೆ ದರ್ಜೆ ಕೊಲೇಜಗೆ ದಿಢೀರ್ ಭೇಟಿ ನೀಡಿದ ರಿಜಿಸ್ಟ್ರಾರ್ ಲೋಕನಾಥ್ ಪರಿಶೀಲನೆ

ಚಿಕ್ಕಬಳ್ಳಾಪುರ.04.ಜೂನ್.25:- ನಗರದ ಎಂಜಿ ರಸ್ತೆಯ ಸರಕಾರಿ ಪದವಿ ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಲೋಕನಾಥ್ ಭೇಟಿ ನೀಡಿ ಜೂ.9ರಂದು ನಡೆಯಲಿರುವ ಸ್ನಾತಕ ಪದವಿ ಪರೀಕ್ಷೆ ಸಂಬಂಧ ಕೊಠಡಿಗಳ ಪರಿಶೀಲನೆ ಮಾಡಿದರು.

ನಗರದ ಎಂಜಿ ರಸ್ತೆಯ ಸರಕಾರಿ ಪದವಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದ ವೇಳೆ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಈ ಬಾರಿ ಸ್ನಾತಕ ಪದವಿ ಪರೀಕ್ಷೆಯನ್ನು ಪಾರದರ್ಶಕ ವಾಗಿ ಗುಣಮಟ್ಟವನ್ನು ಹೆಚ್ಚು ಮಾಡುವ ಉದ್ದೇಶದಿಂದ ಪರೀಕ್ಷೆಗೆ ಮುನ್ನವೇ ಭೇಟಿ ನೀಡು ತ್ತಿದ್ದೇವೆ.

ವಿಶೇಷವಾಗಿ ಎಂ.ಜಿ. ರೋಡ್ ಸರಕಾರಿ ಪದವಿ ಕಾಲೇಜಿನಲ್ಲಿ ಗೋಡೆಗಳು ಕೈಬರಹದಿಂದ ತುಂಬಿಹೋಗಿವೆ.ಇದು ಪರೀಕ್ಷಾ ಪಾವಿತ್ರ್ಯವನ್ನು ಹಾಳು ಮಾಡುವಂತೆ ಇದೆ.

ಎಲ್ಲೆಲ್ಲಿ ಗೋಡೆಯ ಮೇಲೆ ಬರೆಯಲಾಗಿದೆಯೋ ಅದಕ್ಕೆ ಸುಣ್ಣ ಬಣ್ಣ ಬಳಿದು ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದೇನೆ.ಅವರು ಕೂಡ ನಮ್ಮ ಮನವಿಗೆ ಒಪ್ಪಿ ಪರೀಕ್ಷೆಯನ್ನು ವಿಶ್ವವಿದ್ಯಾಲಯದ ಮಾನ ದಂಡಗಳಿಗೆ ಅನುಗುಣವಾಗಿ ನಡೆಸಲು ಸನ್ನದ್ಧರಾಗಿರುವುದಾಗಿ ತಿಳಿಸಿದ್ದಾರೆ.

ಇದೇ ರೀತಿ ಜಿಲ್ಲೆಯ ಎಲ್ಲಾ ಕಾಲೇಜುಗಳಿಗೆ ಭೇಟಿ ನೀಡಲಾಗುವುದು ಎಂದರು.

ಅತಿಥಿ ಉಪನ್ಯಾಸರನ್ನು ಪರಿಗಣಿಸಲಾಗುವುದು
ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಜೂ.14ರಂದು ನಡೆಯುವ ಸ್ನಾತಕ ಪದವಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಚಕ್ಷಣ ಜಾಗೃತದಳದ ಸದಸ್ಯರನ್ನು ನೇಮಕ ಮಾಡಿಕೊಳ್ಳುವಾಗ ಜವಾಬ್ದಾರಿ ಯನ್ನು ನುರಿತ ಖಾಯಂ ಸಿಬ್ಬಂದಿಗೆ ವಹಿಸುತ್ತೇವೆ. ಅಲ್ಲಿ ಏನೇ ಸಮಸ್ಯೆ ಆದರೂ ಅದಕ್ಕೆ ಅವರೇ ನೇರ ಹೊಣೆಯಾಗಿರುತ್ತಾರೆ. ಇವರೊಟ್ಟಿಗೆ ಅತಿಥಿ ಉಪನ್ಯಾಸಕರನ್ನೂ ಕರ್ತವ್ಯಕ್ಕೆ ನಿಯೋಜಿಸು ತ್ತಿದ್ದೇವೆ. ಯಾಕೆ ಅತಿಥಿ ಉಪನ್ಯಾಸಕ ಸಂಘದವರು ಸುದ್ದಿಗೋಷ್ಟಿ ನಡೆಸಿದ್ದಾರೊ,? ಅಲ್ಲಿ ಏನು ಮಾತನಾಡಿದ್ದಾರೊ? ಗೊತ್ತಿಲ್ಲ.ಅತಿಥಿ ಉಪನ್ಯಾಸಕರ ಮೇಲೆ ನಮಗೆ ಯಾವುದೇ ದುರುದ್ದೇಶ ವಿಲ್ಲ. ಇವರನ್ನು ಬಿಟ್ಟು ಪರೀಕ್ಷೆ ನಡೆಸಲು ಆಗುವುದಿಲ್ಲ ಎಂಬುದು ಸತ್ಯವಾದ ಮಾತು ಎಂದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

5 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

6 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

6 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

6 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

8 hours ago