ಬೀದರ.19.ಮೇ.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೌಬಾದ್ ಬೀದರಿನ ಸುವರ್ಣ ಮಹೋತ್ಸವ ಬೀದರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ ಬೀದರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮೇ 19 ರಂದು ಆಯೋಜಿಸಲಾಗಿದೆ.
ಕಾಲೇಜಿನ ಆವರಣದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು.
ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ ಉಪಸ್ಥಿತಿಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಲೋಕಸಭಾ ಸದಸ್ಯರಾದ ಸಾಗರ ಖಂಡ್ರೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಎನ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ್, ಶಶೀಲ ಜಿ. ನಮೋಶಿ, ಭೀಮರಾವ ಬಿ. ಪಾಟೀಲ್, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ.ನಾರಾಯಣರಾವ, ನಗರ ಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಅತಿಥಿಗಳಾಗಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಕೆಜಿ ಜಗದೀಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಾದ ಮಂಜುಶ್ರೀ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಸಿಇಓ ಗಿರೀಶ ದಿಲೀಪ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರೊ. ಶೋಭಾ ಜಿ. ಕಲಬುರಗಿ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೋ. ಗೊಳ್ಳೆ ಶಿವಶರಣಪ್ಪ ಭಾಗ ವಹಿಸುವರು. ಮೇ 20ರಂದು ಬೆಳಿಗ್ಗೆ 10 ಗಂಟೆಗೆ ಸುವರ್ಣ ಕ್ರೀಡಾ ಮತ್ತು ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಪೂಜ್ಯ ಜ್ಯೋತಿರ್ಮಯಾನಂದ ಮಹಾಸ್ವಾಮಿ, ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಹೀಂ ಖಾನ್ ವಹಿಸುವರು.
ಕಾಲೇಜಿನ ಪ್ರಾಂಶುಪಾಲರಾದ ಜಯಶ್ರೀ ಪ್ರಭಾ ಪ್ರಾಸ್ತಾವಿಕ ಮಾತನಾಡುವರು. ವಿಶೇಷ ಆವ್ಹಾನಿತರಾಗಿ ಬೀದರ್ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಬಿಎಸ್ ಬಿರಾದಾರ, ಕಲಬುರಗಿ ಪ್ರಾದೇಶಿಕ ಕಾಲೇಜು ಶಿಕ್ಷಣ ಇಲಾಖೆ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೋ. ಗೊಳ್ಳೆ ಶಿವಶರಣಪ್ಪ ಭಾಗವಹಿಸುವರು ಸುವರ್ಣ ಮಹೋತ್ಸವದ ವಿಶೇಷ ನುಡಿಗಳನ್ನು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿಗಳಾದ ಡಾ.ಕೆಎಂ ಮೇತ್ರಿ ನುಡಿಯುವರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಜಂಟಿ ನಿರ್ದೇಶಕರಾದ ಡಾ. ಆರ್ ಪಿ. ಶಂಕರ, ಪ್ರೊ. ಬಿರಾದಾರ ಸೋಮೇಶ್ವರ ಹಾಗೂ ಪ್ರೊ. ಚಿತಾನಂದ ಭಾಗವಹಿಸುವರು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಚಿವ ರಹೀಂ ಖಾನ್ ಹಾಗೂ ಪ್ರಾಂಶುಪಾಲರಾದ ಪ್ರೊ. ಜಯಶ್ರೀ ಪ್ರಭಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜು, ನೌಬಾದ ಬೀದರ 50 ವರ್ಷಗಳ ಪೂರೈಸಿದ ನಿಮಿತ್ತ ಸುವರ್ಣ ಮಹೋತ್ಸವ ಆಚರಣೆ ಕುರಿತು.
ಕೊಪ್ಪಳ.07.ಆಗಸ್ಟ್.25: ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ.…
ರಾಯಚೂರು.07.ಆಗಸ್ಟ್.25:- ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ https://sevasindhuservices,karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ…
ರಾಯಚೂರು.07.ಆಗಸ್ಟ್.25: ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಶಿಶು ಪಾಲನಾ ಕೇಂದ್ರ ಪ್ರಾರಂಭಿಸಲಾಗಿದ್ದು, ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಸಂದರ್ಶನದ…
ರಾಯಚೂರು.07.ಆಗಸ್ಟ್ .25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2019-20, 2021-22, 2023-24 ಹಾಗೂ 2024-25ನೇ ಸಾಲಿನ ಎಸ್.ಎಫ್.ಸಿ ನಿಧಿ ಹಾಗೂ…
ರಾಯಚೂರು.07.ಆಗಸ್ಟ್.25: ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ 2,419 ಗುಂಪು ಮನೆಗಳು…
ರಾಯಚೂರು.07.ಆಗಸ್ಟ್ .25: ಇಲ್ಲಿನ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 20 ರಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ…